i
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕಳೆದ 2024ರ ಮಾರ್ಚ್ ತಿಂಗಳಲ್ಲಿ ನಡೆದ ಹಿರಿಯೂರು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ.
ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಶೇಕಡಾ 90 ಫಲಿತಾಂಶ ಬಂದಿದ್ದು ಭವ್ಯ.ಎಸ್ 600ಕ್ಕೆ 576 ಅಂಕ ಪಡೆದು ಕಾಲೇಜ್ ಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಆಶಾ.ಯು 561, ನೇಹಾ.ಟಿ.ಡಿ 543 ಅಂಕ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಬಿ.ಎನ್. ತನುಜ 570 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿರುತ್ತಾರೆ. ಐಶ್ವರ್ಯ ಡಿ 562, ಆಶಾ ಸಿ 535 ಅಂಕ ಪಡೆದಿರುತ್ತಾರೆ. ಕಲಾ ವಿಭಾಗದಲ್ಲಿ ಸವಿತಾ ಸಿ 551 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದು, ದಿವ್ಯ 530 ಅಂಕ, ಲಕ್ಷ್ಮಿ ಆರ್ 526 ಅಂಕ ಪಡೆದು ಕೊಂಡಿದ್ದಾರೆ. ಒಟ್ಟು 19 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 144 ವಿದ್ಯಾರ್ಥಿನಿಯರು ಪ್ರಥಮ ದರ್ಜೆ, 51 ವಿದ್ಯಾರ್ಥಿನಿಯರು ದ್ವಿತೀಯ ದರ್ಜೆ, 08 ವಿದ್ಯಾರ್ಥಿನಿಯರು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಜಿ.ಮನೋಹರ ಮತ್ತು ಉಪನ್ಯಾಸಕರು ಸಂತಸ ವ್ಯಕ್ತಪಡಿಸಿ ಉತ್ತಮ ಸಾಧನೆ ಮಾಡಿದ ಮಕ್ಕಳನ್ನು ಅಭಿನಂದಿಸಿದ್ದಾರೆ.