i
ಮೊರಾರ್ಜಿ ಬಾಲಕಿಯರ ವಸತಿ ಪಿಯು ಕಾಲೇಜ್ಗೆ ಶೇ. 100 ರಷ್ಟು ಫಲಿತಾಂಶ..
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕುಂಚಿಗನಾಳು ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜ್ಗೆ 2023-24 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಶೇ. 100 ರಷ್ಟು ಫಲಿತಾಂಶ ಲಭಿಸಿದೆ. ವಸತಿ ಶಾಲೆಯ 16 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ, 46 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಹಾಗೂ ಅಲ್ಪಸಂಖ್ಯಾತ ಇಲಾಖೆಯ ಅಧಿಕಾರಿಗಳು ಅಭಿನಂಧನೆ ಸಲ್ಲಿಸಿದ್ದಾರೆ.
ವಸತಿ ಶಾಲೆಯ 2024-25 ನೇ ಸಾಲಿಗೆ ಪ್ರಥಮ ಪಿಯುಸಿ ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಿಗೆ ಪ್ರವೇಶಾತಿ ಪ್ರಾರಂಭವಾಗಿವೆ. ಶೇ.75 ರಷ್ಟು ಅಲ್ಪಸಂಖ್ಯಾತರಿಗೆ, ಶೇ.25 ರಷ್ಟು ಹಿಂದುಳಿದ ವರ್ಗಗಳಿಗೆ ಸ್ಥಾನಗಳು ಮೀಸಲಾಗಿವೆ. ಇದರ ಜೊತೆಗೆ ಸಿಇಟಿ, ನೀಟ್, ಜೆಇಇ ಮತ್ತು ಸಿಎ, ಸಿಎಲ್ಎಟಿ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ. ದಾಖಲಿಸಲು ಇಚ್ಛಿಸುವವರು ವಸತಿ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು.