i
ಪೊಲೀಸರಿಂದ 18 ಮಾವೋವಾದಿಗಳ ಹತ್ಯೆ…
ಚಂದ್ರವಳ್ಳಿ ನ್ಯೂಸ್, ಕಾಂಕೇರಿ:
ಲೋಕಸಭಾ ಚುನಾವಣೆಗೆ ಕೇವಲ ಇನ್ನೂ ಮೂರು ದಿನ ಬಾಕಿಯಿರುವಂತೆಯೇ ಛತ್ತೀಸ್ ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಭೇಟಿಯಾಡಿದ್ದಾರೆ. ಕಾಂಕೇರಿ ಜಿಲ್ಲೆಯಲ್ಲಿ ಮಂಗಳವಾರ ನಡೆದ ಗುಂಡಿನ ಕಾಳಗದಲ್ಲಿ ಕನಿಷ್ಠ 18 ಮಂದಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡಿನ ಕಾಳಗದಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಸ್ಥಳದಿಂದ ಅಪಾರ ಪ್ರಮಾಣದಲ್ಲಿ ಮದ್ದು, ಗುಂಡು ಮತ್ತಿತರ ಶಸಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಛೋಟೆಬೆಥಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಬಿನಗುಂದ ಮತ್ತು ಕೊರೊನಾರ್ ಗ್ರಾಮಗಳ ನಡುವಿನ ಹಪಟೋಲಾ ಅರಣ್ಯದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗಡಿ ಭದ್ರತಾ ಪಡೆ ಮತ್ತು ರಾಜ್ಯದ ಜಿಲ್ಲಾ ಮೀಸಲು ಪಡೆಗಳ ಜಂಟಿ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಎನ್ಕೌಂಟರ್ನಲ್ಲಿ ಕನಿಷ್ಠ ಎಂಟು ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುಂಡಿನ ಚಕಮಕಿಯಲ್ಲಿ ಗಾಯಗೊಂಡ ಮೂವರು ಭದ್ರತಾ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.