i
ದೇವೇಗೌಡರ ಭಾಷಣದ ವೇಳೆ ಕಾಂಗ್ರೆಸ್ ಮಹಿಳೆಯರಿಬ್ಬರಿಂದ ಪ್ರತಿಭಟನೆ, ಭದ್ರತಾ ಲೋಪ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಕುಂಚಿಟಿಗ ಸಮುದಾಯ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮಾತನಾಡುತ್ತಿದ್ದ ವೇಳೆ ವೇದಿಕೆಗೆ ನುಗ್ಗಿದ ಇಬ್ಬರು ಮಹಿಳೆಯರು ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಇಬ್ಬರು ಮಹಿಳೆಯರು ಕಾಂಗ್ರೆಸ್ ಕಾರ್ಯಕರ್ತೆಯರು ಎಂದು ಶಂಕಿಸಲಾಗಿದೆ. ಕೆಲವು ನಾಯಕರು ಮಾತನಾಡುವವರೆಗೂ ಕಾದು ದೇವೇಗೌಡರು ಭಾಷಣ ಮಾಡುವ ಸರದಿ ಬಂದಾಗ ಘೋಷಣೆಗಳನ್ನು ಕೂಗಿದರು. ಬಿಜೆಪಿ ಮಹಿಳಾ ಕಾರ್ಯಕರ್ತರು ಅವರನ್ನು ಸಭಾಂಗಣದಿಂದ ಹೊರಕ್ಕೆ ಎಳೆದೊಯ್ದರು ಮತ್ತು ನಂತರ ಪೊಲೀಸರು ಅವರನ್ನು ದೂರ ಕಳುಹಿಸಿದರು.