i
ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಶಾಸಕ ರಘುಮೂರ್ತಿ ಮತಯಾಚನೆ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಈಗಾಗಲೇ ಈ ತಿಂಗಳ ೨೬ರಂದು ನಡೆಯುವ ಚುನಾವಣೆಗೆ ವ್ಯಾಪಕ ಪ್ರಚಾರ ನಡೆಸಿದ್ದಾರೆ. ಮತದಾರರೂ ಸಹ ಚಂದ್ರಪ್ಪನವರ ಬಗ್ಗೆ ಹೆಚ್ಚು ವಿಶ್ವಾಸ ಹೊಂದಿದ್ದು, ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಹೆಚ್ಚು ಮತಗಳಲ್ಲಿ ಆಯ್ಕೆಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲವೆಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಅವರು, ಮಂಗಳವಾರ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುರುವನೂರು ಹೋಬಳಿ ಮುದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತಯಾಚನೆ ನಡೆಸಿ ಮಾತನಾಡಿದರು. ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪ್ರಭಾವಿ ಮುಖಂಡರಾಗಿದ್ದು, ಹೆಚ್ಚಿನ ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಾರೆ. ಕಳೆದ ಹತ್ತು ವರ್ಷಗಳಿಂದ ಈ ಭಾಗದ ಕಾರ್ಯಕರ್ತರ ಹಾಗೂ ಮುಖಂಡರ ಸಂಪರ್ಕದಲ್ಲಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲಾ ರೀತಿಯ ಪೂರಕವಾದ ವಾತಾವರಣವಿದೆ. ಪಕ್ಷದ ಕಾರ್ಯಕರ್ತರು ನೇತಾರರು ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಗೆಲುವಿಗಾಗಿ ಇನ್ನೂ ಹೆಚ್ಚು ಶ್ರಮಿಸಬೇಕು ಎಂದರು. ಕಾಂಗ್ರೆಸ್ ಮುಖಂಡರಾದ ಸಿ.ಜೆ.ಜಯಕುಮಾರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಾಬುರೆಡ್ಡಿ, ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ.ಶಶಿಧರ, ನಗರಸಭಾ ಸದಸ್ಯ ಎಂ.ಜೆ.ರಾಘವೇಂದ್ರ, ಬಿ.ಟಿ.ರಮೇಶ್ಗೌಡ, ರಾಜಣ್ಣ ಮುಂತಾದವರು ಉಪಸ್ಥಿತರಿದ್ದರು.