i
ಹಾಸ್ಟೆಲ್ಗಳಲ್ಲಿನ ಆಹಾರ ಪದಾರ್ಥಗಳ ಗುಣಮಟ್ಟದ ಪರಿಶೀಲನೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕೆಲವು ಪ್ರದೇಶಗಳಲ್ಲಿ ಕಾಲೆರಾ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಆಹಾರ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡಲಾಗುತ್ತಿರುವ ಆಹಾರ ಮಳಿಗೆಗಳಿಂದ ಮತ್ತು ರಾಜ್ಯಾದ್ಯಂತ ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ಸ್ನಾತಕೋತ್ತರ ಹಾಸ್ಟೆಲ್ಗಳಲ್ಲಿ ವಿತರಿಸಲಾಗುತ್ತಿರುವ ಆಹಾರ ಪದಾರ್ಥಗಳ ಗುಣಮಟ್ಟದ ಪರಿಶೀಲನೆಯನ್ನು ಕೈಗೊಳ್ಳಲಾಗಿದೆ.
ಇದುವರೆಗೆ ರಾಜ್ಯಾದ್ಯಂತ ಇರುವ ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ಸ್ನಾತಕೋತ್ತರ ಹಾಸ್ಟೆಲ್ಗಳಲ್ಲಿ ಒದಗಿಸಲಾಗುವ 128 ನೀರಿನ ಮಾದರಿಗಳನ್ನು ಮತ್ತು 413 ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, ವಿಶ್ಲೇಷಣಾ ಕಾರ್ಯವು ಚಾಲ್ತಿಯಲ್ಲಿದ್ದು, ಫಲಿತಾಂಶಗಳು ನಿರೀಕ್ಷಣೆಯಲ್ಲಿರುತ್ತವೆ.
ರಾಜ್ಯಾದ್ಯಂತ ಆಹಾರ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡಲಾಗುತ್ತಿರುವ ಆಹಾರ ಮಳಿಗೆಗಳಿಂದ (Cooked Food) 157 ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, ವಿಶ್ಲೇಷಣಾ ಕಾರ್ಯವು ಚಾಲ್ತಿಯಲ್ಲಿದ್ದು, ವಿಶ್ಲೇಷಣಾ ಫಲಿತಾಂಶಗಳು ನಿರೀಕ್ಷಣೆಯಲ್ಲಿರುತ್ತವೆ.
ಏಪ್ರಿಲ್ 17 ಮತ್ತು 18 ರಂದು ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳು ರಾಜ್ಯಾದ್ಯಂತ ಹೋಟೆಲ್ಗಳಲ್ಲಿ ಮತ್ತು ಆಹಾರ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡಲಾಗುತ್ತಿರುವ ಆಹಾರ ಮಳಿಗೆಗಳಿಂದ ಆಹಾರ ಪದಾರ್ಥಗಳ ಮಾದರಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಗ್ರಹಿಸಿ ವಿಶ್ಲೇಷಣೆಗಾಗಿ ಸಲ್ಲಿಸಲು ವಿಶೇಷ ಆಂದೋಲನವನ್ನು ಕೈಗೊಳ್ಳಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.