i
ಕರ್ನಾಟಕದ ವಕೀಲರಿಗೆ ಕಪ್ಪು ಕೋಟ್ ನಿಂದ ತಾತ್ಕಾಲಿಕ ಮುಕ್ತಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಬಿಸಿಲಿನ ಝಳಕ್ಕೆ ಜನ ಬಸವಳಿದಿದ್ದಾರೆ. ಮಳೆಯೂ ಬರುತ್ತಿಲ್ಲ. ಹೀಗಾಗಿ ರಾಜ್ಯದ ಎಲ್ಲಾ ಕೋರ್ಟ್ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಕರ್ನಾಟಕ ಹೈಕೋರ್ಟ್ತುಸು ನಿರಾಳವಾಗುವಂತಹ ಸುದ್ದಿ ನೀಡಿದೆ.
ಕಪ್ಪು ಕೋಟು ಧರಿಸುವುದರಿಂದ ತಾತ್ಕಾಲಿಕ ವಿನಾಯಿತಿ ನೀಡಿದ ಬೇಸಗೆ ವೇಳೆ ಇನ್ನು ವಕೀಲರು ಕಪ್ಪು ಕೋಟು ಧರಿಸಿದ್ದರೂ ನಡೆಯುತ್ತದೆ. ಆದರೆ, ಯಾವ ರೀತಿಯ ದಿರಿಸು ಧರಿಸಬೇಕು ಎಂಬ ಮಾರಗಸೂಚಿಯನ್ನೂ ಕೋರ್ಟ್ಬಿಡುಗಡೆ ಮಾಡಿದೆ.
ಏಪ್ರಿಲ್ 18 ರಿಂದ ಮೇ 31 ರವರೆಗೆ ರಾಜ್ಯಾದ್ಯಂತ ( ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಹಾಜರಾಗುವ ವಕೀಲರಿಗೆ ಕಪ್ಪು ಕೋಟು ಧರಿಸುವುದರಿಂದ ಕರ್ನಾಟಕ ಹೈಕೋರ್ಟ್ ವಿನಾಯಿತಿ ನೀಡಿದೆ. ವಕೀಲರು ಕಪ್ಪು ಕೋಟಿನ ಬದಲಿಗೆ ಸಾದಾ ಬಿಳಿ ಶರ್ಟ್ / ಸಲ್ವಾರ್-ಕಮೀಜ್ ಅಥವಾ ಯಾವುದೇ ಶಾಂತ ಬಣ್ಣದ ದಿರಿಸುಗಳನ್ನು ಧರಿಸಬಹುದು ಎಂದು ನ್ಯಾಯಾಲಯದ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ಮಂಗಳವಾರ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.