i
ಆಗುಂಬೆ ಘಾಟಿಯಲ್ಲಿ ರಸ್ತೆಗೆ ಮರ ಉರುಳಿ ಟ್ರಾಫಿಕ್ ಜಾಮ್…
ಚಂದ್ರವಳ್ಳಿ ನ್ಯೂಸ್, ತೀರ್ಥಹಳ್ಳಿ:
ತಾಲೂಕಿನ ಕೆಲವು ಭಾಗದಲ್ಲಿ ಸಂಜೆಯ ವೇಳೆ ಧಾರಾಕಾರ ಮಳೆಯಾಗುತ್ತಿದ್ದು ಆಗುಂಬೆ ಘಾಟಿಯಲ್ಲಿ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
ಘಾಟಿಯ ಮೂರನೇ ತಿರುವಿನಲ್ಲಿ ಮರ ಬುಡ ಮೇಲಾಗಿದೆ. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ವಿಷಯ ತಿಳಿದು ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯಾಚರಣೆ ನಡೆಸಿ ಮರವನ್ನು ತೆರವುಗೊಳಿಸಿದ್ದಾರೆ.
ಮರ ಬಿದ್ದ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.