i
ಏಪ್ರಿಲ್ 23, 24 ರಂದು ಅಮಿತ್ ಶಾ ಪ್ರಚಾರ; ಬೆಂಗಳೂರಿನ ವಿವಿಧೆಡೆ ರೋಡ್ ಶೋ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 23 ಮತ್ತು 24 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಅವರು ಸರಣಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಯೋಜಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್ ಅವರು ಬುಧವಾರ ತಿಳಿಸಿದ್ದಾರೆ.
ಏಪ್ರಿಲ್ 23 ರಂದು ಅಮಿತ್ ಶಾ ಅವರು ಬೆಂಗಳೂರಿನ ವಿವಿಧೆಡೆ ರೋಡ್ ಶೋ ನಡೆಸಲಿದ್ದಾರೆ, ಮರುದಿನ ಚಿಕ್ಕಮಗಳೂರು, ತುಮಕೂರು ಮತ್ತು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.
ಏಪ್ರಿಲ್ 23 ರಂದು ಯಶವಂತಪುರದಲ್ಲಿ ರೋಡ್ ಶೋ, ನಂತರ ಯಲಹಂಕದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಸಂಜೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಯಲಿದೆ.