i
ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಕಾರ್ಯ ಮಾಡಿಲ್ಲ, ಬಿಜೆಪಿಗೆ ಮತ ನೀಡಿ: ರವೀಂದ್ರಪ್ಪ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕಾಂಗ್ರೆಸ್ ಪಕ್ಷವು ಪಂಚ ಗ್ಯಾರೆಂಟಿಗಳನ್ನು ಪೂರೈಸುವ ನೆಪದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ, ಇದರಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದ್ದು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಜೆಡಿಎಸ್ ಮುಖಂಡ ಎo.ರವೀಂದ್ರಪ್ಪ ಮನವಿ ಮಾಡಿದರು.ಚಿತ್ರದುರ್ಗ ಲೋಕಸಭಾ ತಾಲ್ಲೂಕಿನ ಜೆಜೆ ಹಳ್ಳಿ ಹೋಬಳಿಯ ಓಣಿಹಟ್ಟಿ, ಓಬಳಾಪುರ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾದ ಗೋವಿಂದ್ ಎಂ.ಕಾರಜೋಳರವರ ಪರವಾಗಿ ಮತಯಾಚನೆ ಮಾಡಿ ನಂತರ ಅವರು ಮಾತನಾಡಿದರು.ಈಗಲಾದರೂ ಜನರು ಎಚ್ಚೆತ್ತುಕೊಂಡು ಕಾಂಗ್ರೆಸ್ ಪಕ್ಷದ ಆಶ್ವಾಸನೆಗಳಿಗೆ ಮಾರುಹೋಗದೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಗೋವಿಂದ್ ಎಂ ಕಾರಜೋಳರವರಿಗೆ ತಮ್ಮ ಅಮೂಲ್ಯವಾದ ಮತ ಹಾಕುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.ಬಿಜೆಪಿ ಮುಖಂಡ ಎನ್ ಆರ್ ಲಕ್ಷ್ಮಿಕಾಂತ್ ಮಾತನಾಡಿ, ಕಳೆದ ೧೦ ವರ್ಷಗಳಿಂದ ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರದ ಜನಪರ ಆಡಳಿತದ ಬಗ್ಗೆ ನಿಮಗೆ ತಿಳಿದಿದ್ದು, ಇಡೀ ವಿಶ್ವವೇ ಮೆಚ್ಚುವ ರೀತಿಯಲ್ಲಿ ಭಾರತವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದಿದ್ದಾರೆ, ಮುಂಬರುವ ಚುನಾವಣೆಯಲ್ಲಿ ಇಂತಹ ಬಿಜೆಪಿ ಪಕ್ಷವನ್ನು ಬೆಂಬಲಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಗೋವಿಂದ್ ಕಾರಜೋಳರವರಿಗೆ ಮತ ಹಾಕುವ ಮೂಲಕ ದೇಶದ ಅಭಿವೃದ್ಧಿಗೆ ನಮ್ಮೊಂದಿಗೆ ಕೈಜೋಡಿಸಬೇಕು ಎಂಬುದಾಗಿ ಮನವಿ ಮಾಡಿದರು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಜೆಜೆ ಹಳ್ಳಿ ಮಂಜಣ್ಣ ಸೇರಿದಂತೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.