i
ಭಾರೀ ಗಾಳಿ ಮಳೆಗೆ ವ್ಯಕ್ತಿ ಓರ್ವನ ಬಲಿ…
ಚಂದ್ರವಳ್ಳಿ ನ್ಯೂಸ್, ತೀರ್ಥಹಳ್ಳಿ:
ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ
ವ್ಯಕ್ತಿಯೊಬ್ಬರು ಗಾಳಿ ಮಳೆಯಿಂದ ಮರ ಬಿದ್ದು ಮೃತಪಟ್ಟಿದ್ದಾರೆ.
ಜಯಂತ್ ಭಟ್(64) ಕೋಣಂದೂರಿನಿಂದ ಮನೆಗೆ ಬೈಕಿನಲ್ಲಿ ಹೋಗುವಾಗ ಬಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೋಣಂದೂರು ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.