i
ಅಪ್ರಾಪ್ತೆಯ ಲೈಂಗಿಕ ಬಳಕೆ: ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…
ಚಂದ್ರವಳ್ಳಿ ನ್ಯೂಸ್, ಸೊರಬ:
ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗಿ ವಂಚಿಸಿ ಅಪಹರಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ ಸಂಬಂಧ ಶಿವಮೊಗ್ಗ ಜಿಲ್ಲೆ ಆನವಟ್ಟಿ ಪೊಲೀಸ್ ಸ್ಟೇಷನ್ ನಲ್ಲಿ ಕೇಸ್ ದಾಖಲಾಗಿದೆ.
ಸೊರಬ ತಾಲ್ಲೂಕು ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಕೇಸ್ ದಾಖಲಾಗಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಈ ಭಾಗದ ಗ್ರಾಮವೊಂದರ ಯುವಕ ಅದೇ ಗ್ರಾಮದ ಬಾಲಕಿ ಜೊತೆ ಸಖ್ಯ ಬೆಳಸಿದ್ದಾನೆ. ಆಕೆಯನ್ನ ಪ್ರೀತಿಸುವುದಾಗಿ ಹೇಳಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಕಾಡಿನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕವಾಗಿ ಆಕೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ. ಬಳಿಕ ಆಕೆಯನ್ನು ದೂರದ ಸಂಬಂಧಿಕರ ಮನೆಯಲ್ಲಿ ಬಿಟ್ಟು ಈತ ಪರಾರಿಯಾಗಿದ್ದ. ಈ ಸಂಬಂಧ ಬಾಲಕಿ ತಾಯಿ ಕೊಟ್ಟ ದೂರನ್ನು ಆಧರಿಸಿ ಪೊಲೀಸರು ಕ್ರಮ ಕೈಗೊಂಡು ಪೋಕ್ಸೋ ಕೇಸ್ ನಡಿ ಆರೋಪಿಯನ್ನು ಬಂಧಿಸಿದ್ದಾರೆ.