i
ಮತದಾನ ಮಾಡಿ ಕೊನೆಯುಸಿರೆಳೆದ ಯಶೋದಾ ಉಪಾಧ್ಯ…
ಚಂದ್ರವಳ್ಳಿ ನ್ಯೂಸ್, ಉಡುಪಿ:
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ 65 ವರ್ಷ ಮೇಲ್ಪಟ್ಟ ಎಲ್ಲ ವಯೋವೃದ್ಧರಿಗೆ ಹಾಗೂ ತೀವ್ರ ಅಂಗವಿಕಲ ತೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮನೆಯಿಂದ ಲೋಕಸಭಾ ಚುನಾವಣೆಯ ಅಭ್ಯರ್ಥಿಗೆ ಮತ ದಾನ ಮಾಡಿದ ವೃದ್ಧೆ ಕೆಲವೇ ಕ್ಷಣಗಳಲ್ಲಿ ಕೊನೆಯುಸಿರೆ ಳೆದಿದ್ದಾರೆ. ಮನೆಯಲ್ಲಿ ಮತ ದಾನ ಮಾಡಿ ಕೆಲವೇ ಕ್ಷಣಗಳಲ್ಲಿ ವಯೋವೃದ್ಧೆ ಮೃತಪಟ್ಟಿ ದ್ದಾರೆ. ಮೃತರನ್ನು ಬ್ರಹ್ಮಾವರ ತಾಲೂಕು ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿ ಪಿ.ಯಶೋದಾ ನಾರಾಯಣ ಉಪಾಧ್ಯ (83) ಆಗಿದ್ದಾರೆ. ಇವರು ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿಯಾಗಿ ದ್ದಾರೆ. ಹಿರಿಯ ನಾಗರೀಕರ ಕಾರ್ಯಕ್ರಮದಡಿ ಮನೆಯಿಂದಲೇ ಮತದಾನ ಮಾಡಿದ್ದರು. ಮತದಾನದ ಮಾಡಿದ ನಂತರ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಮತದಾನ ಮಾಡಿದ ಮಹಿಳೆ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಯಶೋದಮ್ಮ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇವರು ಪುತ್ರ ಹಾಗೂ ಇಬ್ಬರು ಪುತ್ರಿಯರನ್ನಗಲಿದ್ದಾರೆ.