i
ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಮಾಡಿದ ಪಾಪಿಗೆ ಗಲ್ಲು ಶಿಕ್ಷೆಯಾಗಲಿ-ಎಬಿವಿಪಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಲವ್ ಜಿಹಾದಿ ಕಾರಣಕ್ಕಾಗಿ ಆರೋಪಿ ಪಯಾಜ್ ಭೀಕರ ಹತ್ಯೆ ಮಾಡಿದ್ದು ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು, ಕೃತ್ಯವನ್ನು ತೀವ್ರವಾಗಿ ಖಂಡಿಸುವುದಲ್ಲದೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಬಿವಿಪಿ ಸಂಘಟನೆ ತಿಳಿಸಿದೆ. ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು ಇಂತಹ ದೇಗುಲದಲ್ಲಿ ಹಾಡುಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರ ಹತ್ಯೆ ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿದೆ. ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಪಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಈ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದಕ್ಕಾಗಿ ಆಕೆಯ ಕಾಲೇಜಿಗೆ ಅಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆಮಾಡಲಾಗಿದೆ. ಕಾಲೇಜಿನ ಒಳಗೆ ಬಂದು ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕೃತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ. ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತ ಗೊಂಡಿದೆ. ಪೊಲೀಸರು ಕೂಡಲೇ ಸೂಕ್ತ ತನಿಖೆ ಕೈಗೊಂಡು, ಅಪರಾಧಿಗೆ ಉಗ್ರ ಶಿಕ್ಷೆ ಆಗುವ ಹಾಗೆ ಮಾಡಿ ವಿದ್ಯಾರ್ಥಿನಿಯ ಕುಂಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ. ಜತೆಗೆ ರಾಜ್ಯಾದ್ಯಂತ ಪೊಲೀಸರು ಶಾಲಾ ಕಾಲೇಜುಗಳ ಬಳಿ ಮಪ್ತಿಯಲ್ಲಿ ಕಾರ್ಯನಿರ್ವಹಿಸಿ ಸಂಭಾವ್ಯ ಘಟನೆಗಳನ್ನು ತಡೆಯಲು ಪ್ರಯತ್ನಿಸಬೇಕು ಎಂದು ಎಬಿವಿಪಿ ಮುಖಂಡರು ಆಗ್ರಹ ಮಾಡಿದ್ದಾರೆ. ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರವಾಗಿಚಿಂತನೆ ನಡೆಸಿ ಕಾರ್ಯ ಪ್ರವೃತ್ತರಾಗಬೇಕು. ಸರ್ಕಾರಗಳು ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಕಾನೂನಿನ ಭಯ ಇಲ್ಲದಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ, ಕಾಲೇಜು ಕ್ಯಾಂಪಸ್ಗಳು ಸುರಕ್ಷತೆಯ ಕೇಂದ್ರಗಳಾಗಬೇಕು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು ಹಾಗೂ ಉನ್ನತ ಮಟ್ಟದತನಿಖೆ ಮಾಡಬೇಕು, ಅಗತ್ಯ ಕಂಡರೆ ಪ್ರಕರಣದ ತನಿಖೆಯನ್ನು ಸಿಬಿಐ ಸಿಒಡಿಗೆ ಹಸ್ತಾಂತರ ಮಾಡಬೇಕೆಂದು ಎಬಿವಿಪಿ ಅಗ್ರಹಿಸಿದೆ.ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕನಕರಾಜ್ ಕೋಡಿಹಳ್ಳಿ, ನಗರ ಕಾರ್ಯದರ್ಶಿ-ಗೋಪಿ, ವಿದ್ಯಾರ್ಥಿನಿ ಪ್ರಮುಖ್-ಚೈತ್ರ, ತಾಲ್ಲೂಕು ಸಂಚಾಲಕ-ದರ್ಶನ್, ಸಹ ಸಂಚಾಲಕ-ಸುಮನ್, ಸಾಮಾಜಿಕ ಜಾಲತಾಣ-ಚಿತ್ರಸ್ವಾಮಿ, ಕಾರ್ಯಕರ್ತರಾದ ಸುದೀಪ್, ಸಂಜನ, ಚೈತ್ರ, ಯುವರಾಜ್, ದಾನೇಶ್, ಸುಮ, ಚಂದನ ಮತ್ತು ತಿಪ್ಪೇಸ್ವಾಮಿ ಇನ್ನು ಇತರರು ಉಪಸ್ಥಿತರಿದ್ದರು.