i
ಆಮ್ ಆದ್ಮಿ ನಾಮಪತ್ರ ತಿರಸ್ಕೃತ, 26 ಅಭ್ಯರ್ಥಿಗಳ ನಾಮಪತ್ರ ಸಿಂಧು…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆದಿದ್ದು ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. ಏ. 12 ರಿಂದ 19 ರವರೆಗೆ ಒಟ್ಟು 27 ಅಭ್ಯರ್ಥಿಗಳಿಂದ 38 ನಾಮಪತ್ರಗಳ ಸಲ್ಲಿಕೆಯಾಗಿತ್ತು. ಇಂದು ನಡೆದ ನಾಮಪತ್ರಗಳ ಪರಿಶೀಲನೆ ವೇಳೆ ಆಮ್ ಆದ್ಮ ಪಕ್ಷದ ಸುಭಾನ್ ಖಾನ್ ಎಂಬ ಅಭ್ಯರ್ಥಿಯು ಸಲ್ಲಿಸಿದ
ನಾಮ ಪತ್ರವು ತಿರಸ್ಕೃತ ಗೊಂಡಿದೆ.
ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಚಂದ್ರಶೇಖರ್ ಹೆಚ್.ಸಿ ಮತ್ತು ಬಹುಜನ ಮುಕ್ತಿ ಪಾರ್ಟಿಯ ಜಿ.ಜಯದೇವ ಅವರ ನಾಮಪತ್ರಗಳನ್ನು ಮಾನ್ಯ ಮಾಡಿದ್ದು ಪಕ್ಷೇತರ ಅಭ್ಯರ್ಥಿಗಳಾಗಿ ಪರಿಗಣಿಸಲಾಗಿದೆ.
ನಾಮಪತ್ರಗಳ ಪರಿಶೀಲನೆ ನಂತರ 26 ಅಭ್ಯರ್ಥಿಗಳ ನಾಮಪತ್ರಗಳನ್ನು ಮಾನ್ಯ ಮಾಡಲಾಗಿದೆ. ಏ. 22 ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು ಮೇ 7 ರಂದು ಮತದಾನ ನಡೆಯಲಿದೆ.
Post Views: 65
Continue Reading
Next: ಕೊಲೆಯಾಗಿದ್ದು ಹಿಂದೂ ಯುವತಿ, ಕಾಂಗ್ರೆಸ್ ಸರ್ಕಾರ ಫಯಾಜ್ ಕುಟುಂಬಕ್ಕೆ ರಕ್ಷಣೆ ಮಾಡುತ್ತಿದೆ… ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ: Hindu girl is murdered, Congress government is protecting Fayaz’s family… ಕಾಂಗ್ರೆಸ್ಸಿನ ತುಷ್ಠೀಕರಣ ರಾಜಕಾರಣಕ್ಕೆ ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಶಾಸಕ ಎಸ್.ಎನ್. ಚನ್ನಬಸಪ್ಪ ಜಂಟಿ ಪತ್ರಿಕಾಗೋಷ್ಟಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಿಂದೂಗಳ ಬಳಿ ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರ ಒಂದಲ್ಲ ಒಂದು ರೀತಿ ಪೋಷಣೆ ಮಾಡುತ್ತ ಬಂದಿದೆ. ಓಲೈಕೆ ರಾಜಕಾರಣ ಹೆಚ್ಚಾಗುತ್ತಿದೆ. ಇತ್ತೀಚಿನ ಉದಾಹರಣೆಯೆಂದರೆ ಯುವತಿ ನೇಹಾ ಕೊಲೆ, ಈ ಕೊಲೆಯನ್ನು ವಿರೋಧಿಸಿ ಇಂದು ಬೆಳಿಗ್ಗೆ ೧೦.೩೦ಕ್ಕೆ ಗೋಪಿವೃತ್ತದಲ್ಲಿ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು. ಕೊಲೆಯಾಗಿದ್ದು ಹಿಂದೂ ಯುವತಿ ನೇಹಾ, ರಕ್ಷಣೆ ನೀಡ ಬೇಕಾಗಿದ್ದು ನೇಹಾ ಕುಟುಂಬಕ್ಕೆ, ಆದರೆ ಇವರು ರಕ್ಷಣೆ ನೀಡಿದ್ದು ಮಾತ್ರ ಫಯಾಜ್ ಕುಟುಂಬಕ್ಕೆ ಇದೆಂತಹ ತುಷ್ಠೀಕರಣ. ಈ ಹಿಂದೆಯೂ ಕೂಡ ಅನೇಕ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಈ ಹಲ್ಲೆಗೆ ಕಾಂಗ್ರೆಸ್ಸ್ ಸರ್ಕಾರ ಕಾರಣವಾಗುತ್ತದೆ. ಈ ಸರ್ಕಾರದಲ್ಲಿ ಏನು ಬೇಕಾದರೂ ಮಾಡಿ ಜಯಿಸಿಕೊಳ್ಳಬಹುದು ಎಂದು ಒಂದು ಕೋಮಿನ ವರ್ಗ ನಿಶ್ಚಯಿಸಿದಂತಿದೆ ಎಂದರು. ಹರ್ಷ, ಪುಟ್ಟಪ್ಪ, ರಾಜು ಹೀಗೆ ಸಾಲು ಸಾಲಾಗಿ ಹಿಂದೂಗಳ ಹತ್ಯಾಯಾಗಿದೆ. ಹತ್ಯೆ ನಡೆದಾಗಲೆಲ್ಲ ಘಟನೆಯನ್ನು ಬೇಗ ದಾರಿ ತಪ್ಪಿಸುತ್ತಾರೆ ಎಂದರು. ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಹಿಂದೂಗಳಿಗೆ ಉಳಿಗಾಲವೇ ಇಲ್ಲವಾಗಿದೆ. ಅದರ ಆಡಳಿತವೇ ಆಗಿದೆ. ಹಿಂದೂಗಳನ್ನು ಹತ್ಯೆ ಮಾಡಲೇ ಬೇಕು ಎಂಬಂತೆ ಘಟನೆಗಳು ನಡೆಯುತ್ತಿದೆ. ಜತ್ಯಾತೀತ ಎಂಬ ಪದಕ್ಕೆ ಅರ್ಥವೇ ಇಲ್ಲವಾಗಿದೆ. ಲವ್ಜಿಹಾದ್ ಹೆಸರಿನಲ್ಲಿ ನಡೆಯುವ ಹತ್ಯೆಗಳಿಗೆ ಈ ಕಾಂಗ್ರೆಸ್ ಸರ್ಕಾರ ಶಕ್ತಿ ತುಂಬುತ್ತಿದೆ ಎಂದರು. ಭಯೋತ್ಪಾದಕರನ್ನು ಸಾಕುವ ತಾಣವಾಗಿದೆ ಕರ್ನಾಟಕ. ಕೋಮು ಭಾವನೆಗಳನ್ನು ಕೆರಳಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಒಂದು ಪಕ್ಷ ಹೀಗೆ ಮುಂದುವರೆದರೆ ಹಿಂದೂಗಳು ಕಾನೂನನ್ನು ಕೈಗೆ ತೆಗೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಸರ್ಕಾರವೇ ಕಾರಣವಾಗುತ್ತದೆ. ಈ ಸರ್ಕಾರ ಷಂಡಾ ಸರ್ಕಾರ ಎಂದರು. ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಡಿ.ಎಸ್.ಅರುಣ್, ಎಂ.ಬಿ.ಭಾನುಪ್ರಕಾಶ್, ಎಸ್.ದತ್ತಾತ್ರಿ, ಜನೇಶ್ವರ್, ಮಾಲತೇಶ್, ಮೋಹನ್ ರೆಡ್ಡಿ, ನಾಗರಾಜ್, ಜಗದೀಶ್, ಹರಿಕೃಷ್ಣ, ರಾಜು ತಲ್ಲೂರು, ಶಿವಾಜಿ, ಶರತ್ ಕಲ್ಯಾಣಿ, ಕೆ.ವಿ. ಅಣ್ಣಪ್ಪ ಇದ್ದರು.