i
ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ ಕೋಳಿ ಸಾಕಾಣಿಕೆ ಕುರಿತು ಆಸಕ್ತ ೨೫ ಮಂದಿ ರೈತರಿಗೆ ಉಚಿತ ತರಬೇತಿ ನೀಡಲಾಗುವುದು ಎಂದು ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ಕೋಳಿ ಸಾಕಾಣಿಕೆ ತರಬೇತಿಯನ್ನು ಏಪ್ರಿಲ್ ೨೨ ಮತ್ತು ೨೩ರಂದು ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ನಿಗಧಿಪಡಿಸಿದ ದಿನಾಂಕದಂದು ಬೆಳಿಗ್ಗೆ ೧೦ ಗಂಟೆಗೆ ತರಬೇತಿಗೆ ಹಾಜರಾಗಬಹುದಾಗಿದೆ. ತರಬೇತಿಗೆ ಹಾಜರಾಗಲು ಇಚ್ಛಿಸುವವರು ೨ ಪಾಸ್ಪೋರ್ಟ್ ಅಳತೆ ಭಾವಚಿತ್ರ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆ ಅಥವಾ ಪಶುವೈದ್ಯಕೀಯ ತರಬೇತಿ ಕೇಂದ್ರ, ಕಾಲ್ಟೆಕ್ಸ್ ಸರ್ಕಲ್, ಕುಣಿಗಲ್ ರಸ್ತೆ, ತುಮಕೂರು, ದೂರವಾಣಿ ಸಂಖ್ಯೆ ೦೮೧೬-೨೨೫೧೨೧೪ನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.