i
ಏ.22 ಮತ್ತು 23 ರಂದು ಲೋಕಾಯುಕ್ತರಿಂದ ಅಹವಾಲು ಸ್ವೀಕಾರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಿಗೆ ಇದೇ ಏಪ್ರಿಲ್ 22 ಮತ್ತು 23ರಂದು ಖುದ್ದಾಗಿ ಭೇಟಿ ನೀಡಿ ಸಾರ್ವಜನಿಕರಿಂದ ಅವಹಾಲುಗಳನ್ನು ಸ್ವೀಕರಿಸಲಿದ್ದಾರೆ.
ಏಪ್ರಿಲ್ 22ರಂದು ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಹೊಸದುರ್ಗ, ಮೊಳಕಾಲ್ಮೂರು ತಾಲ್ಲೂಕು ಕಚೇರಿ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಗಳಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಏ.23ರಂದು ಬೆಳಿಗ್ಗೆ 10 ರಿಂದ 1.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿ, ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಲು ಲಂಚಕ್ಕಾಗಿ ಬೇಡಿಕೆ, ಯೋಜನೆಗಳ ಅನುಷ್ಠಾನದಲ್ಲಿ ಅನಗತ್ಯ ವಿಳಂಬ, ಕರ್ತವ್ಯದಲ್ಲಿ ನಿರ್ಲಕ್ಷತನ, ತಾರತಮ್ಯ ತೋರುವುದು ಸೇರಿದಂತೆ ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ದೂರುಗಳನ್ನು ನಿಗಧಿತ ನಮೂನೆ 1 ಮತ್ತು 2ರಲ್ಲಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.