i
ಮೃಗಾಲಯದಲ್ಲಿ ಜೀವಶಾಸ್ತ್ರಜ್ಞ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಒಬ್ಬರು ಜೀವಶಾಸ್ತ್ರಜ್ಞರಾಗಿ ಕರ್ತವ್ಯ ನಿರ್ವಹಿಸಲು ಅಭ್ಯರ್ಥಿಯನ್ನು ಗುತ್ತಿಗೆ ಆಧಾರದ ಮೇಲೆ ಮಾಸಿಕ ಸಂಭಾವನೆಗೆ ಆಯ್ಕೆ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಜೀವಶಾಸ್ತ್ರಜ್ಞರ ಆಯ್ಕೆಗಾಗಿ ಹೊಂದಿರತಕ್ಕ ವಿದ್ಯಾರ್ಹತೆ ಮತ್ತು ಜವಾಬ್ದಾರಿಗಳ ವಿವರಗಳನ್ನು ಮೈಸೂರು ಮೃಗಾಲಯದ ವೆಬ್ಸೈಟ್ www.mysuruzoo.info news and events ನಲ್ಲಿ ಲಭ್ಯವಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಪಡೆಯಬಹುದಾಗಿದೆ ಎಂದು ಶ್ರೀ ಚಾಮರಾಜ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಿ. ಮಹೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.