i
ಬಿಜೆಪಿ ಅಭ್ಯರ್ಥಿ ಗೆಲುವಿಗೆ ಜೆಡಿಎಸ್ ಆಧಾರ ಸ್ತಂಭ-ಕಾಂತರಾಜ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸತ್ಯವನ್ನು ಮರೆಮಾಚಿ ಸುಳ್ಳಿನ ಮೇಲೆ ಆಡಳಿತ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹಿನ್ನೆಡೆಯಾಗಲಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ತಿಳಿಸಿದರು.ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರ ಗೆಲುವಿಗೆ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಆಧಾರ ಸ್ತಂಭವಾಗಿದ್ದು ಅತ್ಯಂತ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ. ಮದಕರಿನಾಯಕ ಥೀಂ ಪಾರ್ಕ್ ಆಗಬೇಕೆಂಬುದು ನಮ್ಮ ಪ್ರಮುಖ ಬೇಡಿಕೆ. ಅಪ್ಪರ್ಭದ್ರಾ ಯೋಜನೆಗೆ ಈಗಾಗಲೆ ಕೇಂದ್ರ ಸರ್ಕಾರ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಘೋಷಿಸಿದೆ. ನರೇಂದ್ರಮೋದಿ ಮೂರನೆ ಬಾರಿಗೆ ದೇಶದ ಪ್ರಧಾನಿಯಾಗುವುದು ಖಚಿತ. ಜೊತೆಗೆ ಗೋವಿಂದ ಕಾರಜೋಳರವರು ಕೇಂದ್ರ ಮಂತ್ರಿಯಾಗುವುದು ನಿಶ್ಚಿತ. ಹೀಗಾಗಿ ಕ್ಷೇತ್ರಾದ್ಯಂತ ಸಂಚರಿಸಿ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಲೀಡ್ ಕೊಡಿಸಲು ಪ್ರಮಾಣಿಕ ಪ್ರಯತ್ನ ಮಾಡಿದ್ದೇನೆಂದು ಹೇಳಿದರು.ಜೆಡಿಎಸ್ ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಜಿಲ್ಲಾ ಉಪಾಧ್ಯಕ್ಷ ಜೆ.ಎನ್.ಕೋಟೆ ಗುರುಸಿದ್ದಪ್ಪ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಮಠದಹಟ್ಟಿ ವೀರಣ್ಣ, ಯುವ ಘಟಕದ ಜಿಲ್ಲಾಧ್ಯಕ್ಷ ಪ್ರತಾಪ್ಜೋಗಿ ಪತ್ರಿಕಾಗೋಷ್ಠಿಯಲ್ಲಿದ್ದರು.