i
ದೇಶದ ಯಾವ ಮೂಲೆಯಲ್ಲೂ ಮೋದಿ ಅಲೆ ಇಲ್ಲ, ಬಿಜೆಪಿ-ಜೆಡಿಎಸ್ ಸೋಲಿನ ಭೇತಿಯಿಂದಾಗಿ ಅಪವಿತ್ರ ಮೈತ್ರಿ-ಸಿಎಂ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡೀ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು. ಚಿತ್ರದುರ್ಗದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಕಾಂಗ್ರೆಸ್ ವತಿಯಿಂದ ಮಂಗಳವಾರ ಆಯೋಜಿಸಿದ್ದ ಲೋಕಸಭಾ ಚುನಾವಣೆಯ ಬಹಿರಂಗ ಸಭೆಯ ಬೃಹತ್ ಜನಸ್ತೋಮ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ ಎಂದರು. ವರ್ಷಕ್ಕೆ 2 ಕೋಟಿಯಂತೆ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಮಾಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಸೃಷ್ಟಿಸದ ಮೋದಿ ಕೆಲಸ ಕೇಳಿದ ವಿದ್ಯಾವಂತರಿಗೆ ಹೋಗಿ ಪಕೋಡ ಮಾರಾಟ ಮಾಡಿ ಅಂದರು. ನನ್ನ ಕೈಗೆ ಅಧಿಕಾರ ಕೊಡಿ ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು. ಹತ್ತು ವರ್ಷದಲ್ಲಿ ಹದಿನೈದು ಪೈಸೆಯನ್ನೂ ಹಾಕಲಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದೋರು ರೈತ ಖರ್ಚು ಮೂರು ಪಟ್ಟು ಮಾಡಿಟ್ಟಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡೀ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಮೋದಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಹಾಗಾದ್ರೆ ಮೋದಿ ಯಾರ ಪರ ಎನ್ನುವುದನ್ನು ಅರ್ಥ ಮಾಡಿಕೊಳ್ಳಿ ಎಂದರು. ಮೋದಿ ಬಂದ ಮೇಲೆ ಜನ ಸಾಮಾನ್ಯರ, ಮಧ್ಯಮ ವರ್ಗದವರ ಮೇಲೆ ತೆರಿಗೆ ಭಾರ ಹೆಚ್ಚಾಯಿತು. ಉದ್ಯಮಿಗಳ ತೆರಿಗೆ ಭಾರ ಕಡಿಮೆ ಆಯಿತು. ಆದ್ದರಿಂದ ಮೋದಿ ಜನದ್ರೋಹಿ ತಾನೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.ಹೀಗೆ ಮೋದಿಯವರ ವೈಫಲ್ಯಗಳನ್ನು ಪಟ್ಟಿ ಮಾಡುತ್ತಾ ಹೋದರೆ ಹನುಮಂತನ ಬಾಲದಂತೆ ಬೆಳೆಯುತ್ತದೆ ಎಂದು ವಾಗ್ದಾಳಿ ಮಾಡಿದರು.ಗೋ ಬ್ಯಾಕ್ ನರೇಂದ್ರ ಮೋದಿ-ಅಮಿತ್ ಶಾ-ಗೋ ಬ್ಯಾಕ್ ಕಾರಜೋಳ-ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ನಲ್ಲಿಯೇ ಹೇಳಿದರು. ಬಜೆಟ್ ಸಂಸತ್ತಿನಲ್ಲಿ ಅನುಮೋದನೆಯಾಗಿದೆ. ಬೊಮ್ಮಾಯಿಯವರೂ ಕೂಡ ತಮ್ಮ ಬಜೆಟ್ ನಲ್ಲಿ ಧನ್ಯವಾದ ಹೇಳಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಹೇಳಿ ಇಂದಿನವರೆಗೆ ಯಾವುದೂ ಆಗಿಲ್ಲ. ಅದರ ಜೊತೆಗೆ 15ನೆ ಹಣಕಾಸು ಆಯೋಗ 5495 ಕೋಟಿ ವಿಶೇಷ ಅನುದಾನ ಕೊಡಲಿಲ್ಲ. ಕೊಡದೇ ಈರಲು ಕಾರಣ ನಿರ್ಮಲಾ ಸೀತಾರಾಮನ್ ಹಾಗೂ ನರೇಂದ್ರ ಮೋದಿ ಅವರು. ಬರಪರಿಹಾರಕ್ಕೂ ಒಂದು ರೂ.ಇಲ್ಲ. ನರೇಂದ್ರ ಮೋದಿ ಅವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ ಗೋ ಬ್ಯಾಕ್ ನರೇಂದ್ರ ಮೋದಿ, ಗೋ ಬ್ಯಾಕ್ ಅಮಿತ್ ಶಾ, ಗೋ ಬ್ಯಾಕ್ ಗೋವಿಂದ ಕಾರಜೋಳ ಎಂದು ಹೇಳುತ್ತಿದ್ದೇವೆ ಎಂದರು.ಬಿಜೆಪಿ ಅವರಿಗೆ ಮತ ಕೇಳುವ ಹಕ್ಕು ಇಲ್ಲ ಎಂದು ಅವರಿಗೆ ಹೇಳುತ್ತೇವೆ. ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ ಎಂದರು.ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಸ್ಥಿತ-2019ರಲ್ಲಿ ಪ್ರವಾಹ ಪರಿಸ್ಥಿತಿ ಇತ್ತು. 2023-24ರಲ್ಲಿ ಭೀಕರ ಬರ ಇದೆ. ಬರಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಪರಿಸ್ಥಿತಿ ಬಂತು. ಅಲ್ಲಿ ಅಟಾರ್ನಿ ಜನರಲ್ ಅವರು ನರೇಂದ್ರ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೇಳಿದ ಸುಳ್ಳಿನ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ತೆರಿಗೆ ಅನ್ಯಾಯದ ಬಗ್ಗೆ ರಾಜ್ಯ ಸರ್ಕಾರ ಸೂಕ್ತವಾದ ಹಾಗೂ ಸತ್ಯಾಂಶವನ್ನು ಮಂಡಿಸಿದ್ದರಿಂದ ಕರ್ನಾಟಕದ ಮೇಲೆ ಕರುಣೆ ತೋರಿತು. ಸರ್ವೋಚ್ಚ ನ್ಯಾಯಾಲಯ ನಮ್ಮ ಪರವಾಗಿ ಕರುಣೆ ತೋರಿದೆ ಎಂದರು. ಒಂದು ವೇಳೆ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗದೇ ಹೋಗಿದ್ದರೆ ಒಂದು ರೂ.ಪರಿಹಾರ ನೀಡುತ್ತಿರಲಿಲ್ಲ ಎಂದರು.ರಾಜ್ಯದ ಪರವಾಗಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಭಾರತೀಯ ಚೆಂಬು ಪಕ್ಷದ ಸುಳ್ಳುಗಳನ್ನು ಜನತೆಗೆ ತೋರಿಸುತ್ತೇವೆ ಎಂದರು. ಈಗಾಗಲೇ ಸರ್ವೋಚ್ಚ ನ್ಯಾಯಾಲಯಕ್ಕೇ ಹೋಗಿದ್ದೇವೆ. ನ್ಯಾಯವನ್ನು ಕೇಳಲು ಜನತಾ ನ್ಯಾಯಾಲಯದ ಮೊರೆ ಹೋಗುತ್ತೇವೆ. ಮೋದಿ ಸರ್ಕಾರವನ್ನು ಕರ್ನಾಟಕದಿಂದ ಮಾತ್ರವಲ್ಲದೆ ಭಾರತದ ಇತರೆಡೆಗಳಿಂದಲೂ ಕಿತ್ತು ಹಾಕಲು ಪ್ರಯತ್ನಿಸುತ್ತೇವೆ ಎಂದು ರಂದೀಪ್ ಸುರ್ಜೀವಾಲ ಹೇಳಿದರು.ಬಿಜೆಪಿ-ಜೆಡಿಎಸ್ ಗೆ ಸೋಲಿನ ಭೀತಿ-
ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ಸೋಲಿನ ಭೀತಿ ಕಾಡಿದ್ದರಿಂದಾಗಿ ಅವರು ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಿದ್ದರಾಮಯ್ಯ ಹೇಳಿದರು.