i
ಬೆಂ.ಗ್ರಾ. ಜಿಲ್ಲೆಯಲ್ಲಿ ಶೇ81.90 ಮತದಾನ:ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು ಗ್ರಾಮಾಂತರ:
ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ 81.90ರಷ್ಟು ಮತದಾನವಾಗಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್ ಶಿವಶಂಕರ್ ತಿಳಿಸಿದ್ದಾರೆ.
ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಸುಗಮ ಹಾಗೂ ಶಾಂತಿಯುತವಾಗಿ ನಡೆದಿರುವುದಕ್ಕಾಗಿ ಅವರು ಧನ್ಯವಾದ ತಿಳಿಸಿದ್ದಾರೆ.
ಮತದಾನದ ಶೇಕಡಾವಾರು ವಿವರ-
178-ಹೊಸಕೋಟೆ ವಿಧಾನಸಭಾ ಕ್ಷೇತ್ರ: 86.44%
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರ: 82.69%
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ: 80.16%
181-ನೆಲಮಂಗಲ ವಿಧಾನಸಭಾ ಕ್ಷೇತ್ರ: 77.98%