i
ಹಾವು ಕಡಿತದು ಮೃತಪಟ್ಟ ಬಾಲಕಿ ಮುಗಿಲುಮುಟ್ಟಿದ ಪೋಷಕರ ಆಕ್ರಂದನ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಹಾವು ಕಡಿತದಿಂದ 7 ವರ್ಷದ ಬಾಲಕಿ ಮೃತಪಟ್ಟ ಘಟನೆ ತಾಲೂಕಿನ ಕೋಳೂರು ಗ್ರಾಮದ ತೋಟವೊಂದರಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ರಾಮಾಂಜಿ, ವಿನೋದಮ್ಮ ದಂಪತಿಯ 7 ವರ್ಷದ ಪುತ್ರಿ ಅನುಷಾ ಸಾವನ್ನಪ್ಪಿರುವ ಬಾಲಕಿ.
ರಾಮಾಂಜಿ, ವಿನೋದಮ್ಮ ದಂಪತಿ ತಾಲೂಕಿನ ತೂಬಗೆರೆ ಹೋಬಳಿಯ ಟಿ.ಹೊಸಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಕೋಳೂರು ಗ್ರಾಮದಲ್ಲಿರುವ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಅಲ್ಲೇ ವಾಸವಾಗಿದ್ದರು.
ಶುಕ್ರವಾರ ಸಂಜೆ ಸುಮಾರು 6 ಗಂಟೆಸಮಯದಲ್ಲಿ ಮಗುವಿಗೆ ಹಾವು ಕಚ್ಚಿದ್ದು, ಅಸ್ವಸ್ಥಗೊಂಡಿದ್ದ ಮಗುವನ್ನು ಪೋಷಕರು, ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.