i
ಬಿಜೆಪಿ ಅಭ್ಯರ್ಥಿ ಗೆಲುವಿನ ಸನಿಹಕ್ಕೂ ಕಾಂಗ್ರೆಸ್ ಅಭ್ಯರ್ಥಿ ಬರಲ್ಲ: ಆರಗ ಜ್ಞಾನೇಂದ್ರ…
ಚಂದ್ರವಳ್ಳಿ ನ್ಯೂಸ್, ತೀರ್ಥಹಳ್ಳಿ:
ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವಿನ ವಾತಾವರಣ ಕಂಡು ಬಂದಿದ್ದು, ಬಿಜೆಪಿ-ಜೆಡಿಎಸ್ ಹೊಂದಾಣಿಕೆಯಿಂದ ಬಿಜೆಪಿಗೆ ಆನೆ ಬಲ ಬಂದಂತಾಗಿದೆ ಎಂದು ಶಾಸಕ,ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಪಟ್ಟಣದ ಶ್ರೀ ರಾಮಮಂದಿರದಲ್ಲಿ ನೆಡೆದ ಜೆಡಿಎಸ್-ಬಿಜೆಪಿ ಜಂಟಿ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದರು. ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ರವರ ಗೆಲುವು ಖಚಿತವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ಸನಿಹವು ಬರುವುದಿಲ್ಲ, ಬಿಜೆಪಿ ಕಾರ್ಯಕರ್ತರು ಯುದ್ದದ ರೀತಿಯಲ್ಲಿ ಹೋರಾಟ ಮಾಡುತ್ತಿದ್ದಾರೆ ಎಂದರು.
ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅಭಿವೃದ್ಧಿ,ಜನಪರ ಯೋಜನೆಗಳು ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ. ಜಾತಿ, ಧರ್ಮ, ಪಕ್ಷ ಮೀರಿ ಕ್ಷೇತ್ರದ ಜನತೆ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದರು.
ಈಶ್ವರಪ್ಪನವರ ಸ್ಪರ್ಧೆಯಿಂದ ಪಕ್ಷಕ್ಕೆ ಯಾವುದೇ ನಷ್ಠವಿಲ್ಲ, ನನಗೂ ಈಶ್ವರಪ್ಪನವರಿಗೂ ರಾಜಕೀಯ ಹೊರತುಪಡಿಸಿದರೆ ಉತ್ತಮ ಸಂಬಂಧವಿದೆ ಎಂದರು.
ಮೇ.೨೯ರಸೋಮವಾರ ತಾಲೂಕಿನ ಕೋಣಂದೂರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದಾರೆ.
ಹಾಸನದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣನವರ ಪೆನ್ ಡ್ರೈವ್ ಲೈಂಗಿಕ ಹಗರಣದ ಹಿಂದೆ ಕಾಂಗ್ರೆಸ್ ಪಕ್ಷದ ಷಡ್ಯಂತ್ರವಿದೆ, ರಾಜ್ಯ ಸರ್ಕಾರ ಈಗಾಗಲೇ ತನಿಖೆಗೆ ಆದೇಶಿಸಿದೆ ಎಂದರು.