i
ವಾಹನ ಡಿಕ್ಕಿ ಮಹಿಳೆ ಸಾವು…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಭದ್ರಾವತಿ ಯ ಚನ್ನಗಿರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ರು ಪ್ರಕರಣ ದಾಖಲಿಸಿದ್ದಾರೆ.
ಚನ್ನಗಿರಿ ಮುಖ್ಯ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ ವೇಗವಾಗಿ ಬಂದ ವಾಹನವೊಂದು ಮಹಿಳೆಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿ ಆಗಿದೆ. ಘಟನೆ ಹಿನ್ನೆಲೆ ಏನು ಎಂಬುದು ಸಹ ಅಲ್ಲಿದ್ದವರಿಗೆ ಗೊತ್ತಾಗಲಿಲ್ಲ. ಅಷ್ಟರಲ್ಲಿ ಘಟನೆ ನಡೆದು ಹೋಗಿತ್ತು. ಪ್ರಕರಣ ಸಂಬಂಧ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಯುವಕನಿಂದ ಬೆದರಿಕೆ;
ಭದ್ರಾವತಿ ಗ್ರಾಮಾಂತರ ಪೊಲೀಸ್ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಯುವಕನೊಬ್ಬ ಊರಿಗೆ ಹೋಗುವ ದಾರಿಯಲ್ಲಿ ಬೆದರಿಕೆ ಹಾಕಿದ ಘಟನೆ ಬಗ್ಗೆ ವರದಿಯಾಗಿದೆ. ಈ ಸಂಬಂಧ ಹೆದರಿದ ವ್ಯಕ್ತಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಬರುತ್ತಲೇ ಯುವಕ ಪರಾರಿ ಆಗಿದ್ದಾನೆ. ಪ್ರಕರಣ ಪೊಲೀಸ್ಠಾಣೆ ಮೆಟ್ಟಿಲೇರಿದೆ.