i
ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕರಾಮುವಿ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಆಸಕ್ತರು ಮೇ 9 ರೊಳಗಾಗಿ ಬೆಳಗ್ಗೆ ೧೦.೦೦ ಗಂಟೆಯಿಂದ ಸಂಜೆ ೪.೩೦ ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.