i
ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ಗೆ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಲೋಕಸಭೆ ಚುನಾವಣೆಯ ಗದ್ದಲದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್ನ ಆರು ಸ್ಥಾನಗಳಿಗೆ ಗುರುವಾರ ಚುನಾವಣಾ ದಿನಾಂಕ ಘೋಷಿಸಿ ಆದೇಶ ಹೊರಡಿಸಿದೆ.ರಾಜ್ಯದ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಚುನಾವಣೆ ಘೋಷಿಸಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ ಮತ್ತು ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.6 ಕ್ಷೇತ್ರಗಳು-
ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆ ದಿನ. ನಾಮಪತ್ರ ಹಿಂಪಡೆಯಲು ಮೇ 20 ಕೊನೆ ದಿನವಾಗಿದೆ ಎಂದು ಚುನಾವಣಾ ಆಯೋಗ ಆದೇಶದಲ್ಲಿ ತಿಳಿಸಿದೆ.