i
ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿವಿಧೆಡೆಗೆ ಸಾರಿಗೆ ಸೇವೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದ್ದು, ಮೇ 4, 12 ಹಾಗೂ 18 ರಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆಯಲಿದ್ದು, ಬೆಂಗಳೂರು ನಗರದ ವಿವಿಧ ಭಾಗಗಳಿಗೆ ವ್ಯವಸ್ಥಿತ ಸಾರಿಗೆ ಸೇವೆ ಕಲ್ಪಿಸಲಾಗಿದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ.