i
ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ಚಂದ್ರವಳ್ಳಿ ನ್ಯೂಸ್, ಹೊಸನಗರ :
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ನಡೆದಿದೆ.
ಬಸವಾಪುರ ಗ್ರಾಮದ ತಿಮ್ಮಪ್ಪ (58) ಮೃತ ವ್ಯಕ್ತಿಯಾಗಿದ್ದಾರೆ. ತಮ್ಮ ಮನೆ ಸಮೀಪದ ಕಾಡಿಗೆ ದರಗು ತರಲು ಹೋದ ವೇಳೆ ಈ ಘಟನೆ ನಡೆದಿದೆ.
ಪತ್ನಿ ಮತ್ತು ಮಕ್ಕಳು ಈ ಸಂಧರ್ಭದಲ್ಲಿ ಆನೆ ದಾಳಿಯಿಂದ ಪಾರಾಗಿದ್ದಾರೆ ಎನ್ನಲಾಗುತ್ತಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.