i
ಕುಡಿಯುವ ನೀರು ಸಮಸ್ಯೆ: ಸಹಾಯವಾಣಿ ಸಂಪರ್ಕಿಸಲು ಸಲಹೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2023-24ನೇ ಸಾಲಿನಲ್ಲಿ ಚಿತ್ರದುರ್ಗ ತಾಲ್ಲೂಕು ಅನ್ನು ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಬರ ನಿರ್ವಹಣೆ ಅಂಗವಾಗಿ ಜನ-ಜಾನುವಾರುಗಳಿಗೆ ಕುಡಿಯುವ ನೀರನ್ನು ಒದಗಿಸುವ ಸಂಬಂಧ ಚಿತ್ರದುರ್ಗ ತಾಲ್ಲೂಕು ಕಚೇರಿಯ ಸಹಾಯವಾಣಿ ಸಂಖ್ಯೆ 08194-222416 ಗೆ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಚಿತ್ರದುರ್ಗ ತಾಲ್ಲೂಕು ತಹಶೀಲ್ದಾರ್ ಡಾ.ನಾಗವೇಣಿ ತಿಳಿಸಿದ್ದಾರೆ.