i
ಮೇ 6 ಮತ್ತು 7ರಂದು ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ?
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೇ 6 ಮತ್ತು 7ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 6ರಂದು ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಮೇ 7ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.