i
ಬರ ಪರಿಹಾರ ಕುರಿತು ಪ್ರಗತಿ ಪರಿಶೀಲನಾ ಸಭೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಕೆಸ್ವಾನ್ ವಿಡಯೋ ಸಭಾಂಗಣದಲ್ಲಿ ಸೋಮವಾರ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಬರಪರಿಹಾರ ಹಾಗೂ ಪ್ರಕೃತಿ ವಿಕೋಪ ವಿಷಯಗಳಿಗೆ ಸಂಬಂಧಿಸಿದಂತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಬರ ಪರಿಸ್ಥಿತಿ ನಿರ್ವಹಣೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು, ಬಾಕಿ ಬೆಳೆಹಾನಿ ಪರಿಹಾರ ವಿತರಣೆ, ಮುಂಗಾರು-2024ಕ್ಕೆ ಸಂಬಂಧಿಸಿದಂತೆ ಜಿಲ್ಲೆಗಳಲ್ಲಿ ಕೈಗೊಂಡಿರುವ ಪೂರ್ವಸಿದ್ಧತೆಗಳ ಕುರಿತು ಹಾಗೂ ಗುಡುಗು ಸಿಡಿಲು, ಮಳೆ ಮತ್ತು ಇತರೆ ಪ್ರಕೃತಿ ವಿಕೋಪದಿಂದ ಉಂಟಾಗುವ ಹಾನಿಯನ್ನು ತಡೆಯಲು ಕೈಗೊಂಡ ಕ್ರಮಗಳು ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಸೇರಿದಂತೆ ತಹಶೀಲ್ದಾರ್ಗಳು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಅಭಿಯಂತರರು, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಇದ್ದರು.