i
ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “Sustainable Ground Water Management for Water Security” ವಿಷಯದ ಮೇಲೆ ಜೂನ್ 19 ರಿಂದ 21 ರವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.
ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳಿಂದ ನುರಿತ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸಗಳನ್ನು ನೀಡಲಿದ್ದಾರೆ. ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಸಮ್ಮೇಳನದಲ್ಲಿ ಸಂಶೋಧನಾ ಲೇಖನವನ್ನು ಮಂಡಿಸಬಹುದಾಗಿದ್ದು, ಆಯ್ಕೆಯಾದ ಸಂಶೋಧನಾ ಲೇಖನಗಳಿಗೆ ನಗದು ಬಹುಮಾನ ನೀಡಲಾಗುವುದು.
ಸಮ್ಮೇಳನದಲ್ಲಿ ಭಾಗವಹಿಸಲು ಜೂನ್ 10 ರೊಳಗಾಗಿ Google form – https://forms.gle/QDXV64LDibFbHydc9 ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮ ಸಂಯೋಜಕರು ಮೊ.ಸಂ. 9845258894 ಮತ್ತು 9743084194 ಅಥವಾ ಅಕಾಡೆಮಿಯ ವೆಬ್ಸೈಟ್ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.