i
ಸರ್ಕಾರಿ ಡಿಪ್ಲೋಮಾ ಕಾಲೇಜ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ ೨೦೨೪-೨೫ನೇ ಸಾಲಿನ ಪ್ರಥಮ ಡಿಪ್ಲೋಮಾ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಒಟ್ಟಾರೆ ಶೇಕಡ ೩೫ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅರ್ಜಿ ನಮೂನೆ ಹಾಗೂ ಮಾಹಿತಿ ಪುಸ್ತಕವನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್ಸೈಟ್ https://dtetech.karnataka.gov.in/kartechnical ಮೂಲಕ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಮೂಲ ದಾಖಲಾತಿಗಳೊಂದಿಗೆ ಮೇ ೨೧ರ ಸಂಜೆ ೫ ಗಂಟೆಯೊಳಗೆ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9448647636, 900816036, ದೂ.ಸಂ. 0816-2970104/ 2006134 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.