i
6ನೇ ತರಗತಿ : ಮೇ-19ರಂದು ಸಾಮಾನ್ಯ ಪ್ರವೇಶ ಪರೀಕ್ಷೆ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ / ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿಶಾಲೆಗಳಿಗೆ (ಆಂಗ್ಲ ಮಾಧ್ಯಮ) ೬ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮೇ ೧೯ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುವುದು. ೬ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಶಾಲೆಯ ಪ್ರಾಂಶುಪಾಲರಿಂದ ಪ್ರವೇಶ ಪತ್ರವನ್ನು ಪಡೆದು ನಿಗದಿ ಪಡಿಸಿದ ದಿನಾಂಕದಂದು ಪರೀಕ್ಷೆಗೆ ಹಾಜರಾಗಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು, ದೂರವಾಣಿ ಸಂಖ್ಯೆ: ೦೮೧೬-೨೨೭೩೭೨೪ನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.