![](https://www.chandravallinews.com/wp-content/uploads/2024/05/WhatsApp-Image-2024-05-15-at-5.25.01-AM.jpeg)
i
ಅಗಸರಹಳ್ಳಿ ಗಣೇಶ್ ನಾಯ್ಕ ಇನ್ನಿಲ್ಲ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮುರುಘಾಮಠದ ಸಮೀಪವಿರುವ ಅಗಸರಹಳ್ಳಿಯ ವಾಸಿ ಗಣೇಶ್ನಾಯ್ಕ(೫೫) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.
ಮನೆಯಲ್ಲಿ ಎದೆನೋವು ಕಾಣಿಸಿಕೊಂಡಾಗ ಕೂಡಲೆ ಜಿಲ್ಲಾಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು.
ಮೃತರು ಪತ್ನಿ ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಹೊಳಲ್ಕೆರೆ ತಾಲ್ಲೂಕಿನ ಆರ್.ನುಲೇನೂರಿನಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತೆಂದು ಕುಟುಂಬದವರು ತಿಳಿಸಿದ್ದಾರೆ.