![](https://www.chandravallinews.com/wp-content/uploads/2024/05/WhatsApp-Image-2024-05-14-at-4.06.05-PM.jpeg)
i
ಐಪಿಎಲ್ ಬೆಟ್ಟಿಂಗ್ ಹಿರಿಯೂರಿನಲ್ಲಿ ಇಬ್ಬರ ಬಂಧನ…..
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಐಪಿಎಲ್(IPL) ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ಜೂಜುಕೋರ ಆರೋಪಿಗಳನ್ನು ಹಿರಿಯೂರು ಪೊಲೀಸರು ಬಂಧಿಸಿದ್ದಾರೆ. ಹಿರಿಯೂರು ನಗರದ ರಾಮ ಮಂದಿರ ಬಳಿ ಬೆಟ್ಟಿಂಗ್ ಆಡುತ್ತಿದ್ದ ಆರೋಪಿಗಳಾದ ತಿಮ್ಮೇಗೌಡ, ಶಶಿಕುಮಾರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 1 ಲಕ್ಷ 25 ಸಾವಿರ ಹಣ, ಎರಡು ಮೊಬೈಲ್ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಹಿರಿಯೂರು ಸಿಪಿಐ ರಾಘವೇಂದ್ರ ಖಾಂಡಿಕೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.