i
ಕುಮಾರಸ್ವಾಮಿ ಸೇರಿ ರಾಜ್ಯದ ನಾಲ್ವರು ಕೇಂದ್ರ ಸಚಿವರು…
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ನರೇಂದ್ರ ಮೋದಿ ಅವರು 3ನೇ ಅವಧಿಗೆ ಪ್ರಧಾನಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ಅವರ ಸಂಪುಟದಲ್ಲಿ ಕರ್ನಾಟಕ ರಾಜ್ಯದಿಂದ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಅವರು ಮಾತ್ರ ಪ್ರಮಾಣ ಸ್ವೀಕರಿಸಿದರು.
ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಅವರು ಕೇಂದ್ರ ಸಂಪುಟ ದರ್ಜೆಯ ಸಚಿವರಾದರೆ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಅವರು ಕೇಂದ್ರದ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.