i
ನವೆಂಬರ್ 4ರಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ(ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಪಂಚಾಯತ್ 2022-23ನೇ ಸಾಲಿನ ಎರಡನೇ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ನವೆಂಬರ್ 4ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ತಿಳಿಸಿದ್ದಾರೆ.