i
ಕರಿಬಸವೇಶ್ವರಜ್ಜಯ್ಯ-ದುರ್ಗಾಪರಮೇಶ್ವರಿ ಮಹಾರಥೋತ್ಸವದಲ್ಲಿ ಪಾಲ್ಗೊಂಡ ಶಾಸಕ ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಟಿ ರಘುಮೂರ್ತಿ ರವರು ತುರುವನೂರು ಹೋಬಳಿಯ ಬೆಳಗಟ್ಟ ಗ್ರಾಮದಲ್ಲಿ ನಡೆದ ಶ್ರೀ ಗುರು ಕರಿಬಸವೇಶ್ವರಜ್ಜಯ್ಯ ಸ್ವಾಮಿ ಹಾಗೂ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಮಹಾರಥೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬುರೆಡ್ಡಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ರವಿಕುಮಾರ್, ಮುಖಂಡರಾದ ಸುಭಾಶ್ ರೆಡ್ಡಿ, ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರುಗಳು ಮುಖಂಡರುಗಳಾದ ಸುಭಾಷ್ ರೆಡ್ಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಮತ್ತು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.