i
ಮುಂದಿನ 5 ದಿನ ಗುಡುಗು ಸಹಿತ ಆಲಿಕಲ್ಲು ಮಳೆ ಸಾಧ್ಯತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಜಿಲ್ಲೆಗಳಾದ ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 4ರವರೆಗೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಮೋಡ ಕವಿದ ವಾತಾವರಣದೊಂದಿಗೆ ಗಾಳಿಯ ಪ್ರಮಾಣ ಇರಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.