i
ಬಿಜೆಪಿ ಗೆಲುವಿಗೆ ಕಾರ್ಯಕರ್ತರು, ಮುಖಂಡರು ದುಡಿಯಬೇಕು- ಸದಾನಂದ ಗೌಡ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದ ವೀಕ್ಷಕರಾಗಿ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಆಗಮಿಸಿ ಚಿತ್ರದುರ್ಗ ನಗರದ ಹೊರ ವಲಯದ ತಿರುಮಲ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಹೆಚ್ಚಿನ ಜಾಗ್ರತೆ ವಹಿಸಿ ಗುಪ್ತ ಮತದಾನ ಪ್ರಕ್ರಿಯೆ ಕುರಿತು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.
ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ಸಮಾಲೋಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎ .ಮುರಳಿ, ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಗೂಳಿಹಟ್ಟಿ ಶೇಖರ್ ಮತ್ತಿತರರು ಉಪಸ್ಥಿತರಿದ್ದರು.