i
ಚಿತ್ರದುರ್ಗ ಲೋಕಸಭಾ ಚುನಾವಣೆ: ಮಾ.28ರಂದು ಯಾವುದೇ ನಾಮಪತ್ರ ಸ್ವೀಕೃತವಾಗಿಲ್ಲ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಲೋಕಸಭಾ ಕ್ಷೇತ್ರ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಗುರುವಾರ ಯಾವುದೇ ನಾಮಪತ್ರ ಸ್ವೀಕೃತವಾಗಿರುವುದಿಲ್ಲ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ನಂ.18 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಚುನಾವಣಾಧಿಕಾರಿಗಳ ಕಾರ್ಯಾಲಯವನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಥಾಪಿಸಲಾಗಿದೆ. ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಸಾರ್ವತ್ರಿಕ ರಜಾ ದಿನ ಹೊರತುಪಡಿಸಿ, ಪ್ರತಿ ದಿನ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕಾರ ಮಾಡಲಾಗುತ್ತದೆ. ಏಪ್ರಿಲ್ 04 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.