Stories

ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ನ್ಯಾಯ ಘಟಕ ಆರಂಭ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:   ಕಾಂಗ್ರೆಸ್‌ನಲ್ಲಿ ಹೊಸದಾಗಿ ಆರಂಭಗೊಂಡಿರುವ ಸಾಮಾಜಿನ ನ್ಯಾಯ ಘಟಕಕ್ಕೆ ಸಣ್ಣ...
ಅಲೆಮಾರಿಗಳ ಆಯೋಗ ರಚನೆಗೆ ಮುಖ್ಯಮಂತ್ರಿಗಳಿಗೆ ಮನವಿ-ದ್ವಾರಕನಾಥ್… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಟೆಂಟ್, ಗುಡಿಸಲು, ಗುಡಾರಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಅರೆಅಲೆಮಾರಿಗಳು ಸಮಾಜದ ಮುಖ್ಯ ವಾಹಿನಿಗೆ...
ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ರಾಜೀನಾಮೆ ಮತ್ತು ನಿವೃತ್ತಿಯಿಂದ ತೆರವಾಗುತ್ತಿರುವ ವಿಧಾನಪರಿಷತ್ತಿನ ಕೆಲವು ಪದವಿಧರ ಮತ್ತು ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ. ನೈಋತ್ಯ ಪದವಿಧರ ಕ್ಷೇತ್ರ ಆಯನೂರು ಮಂಜುನಾಥ್ ಅವರ ರಾಜೀನಾಮೆಯಿಂದ 19-4-2023 ರಿಂದ ತೆರವಾಗಿದ್ದು, ಈ ಕ್ಷೇತ್ರಕ್ಕೆ ಚುನಾವಣೆ ನಡೆದಿಲ್ಲ. ಈ ಸ್ಥಾನದ ಅವಧಿ 21-06-2024 ರ ವರೆಗೆ ಇದೆ.  ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಪುಟ್ಟಣ್ಣ ಅವರ ರಾಜೀನಾಮೆಯಿಂದ 16-03-2023 ರಿಂದ ತೆರವಾಗಿರುವ ಕ್ಷೇತ್ರಕ್ಕೆ ಚುನಾವಣೆ ನಡೆದಿಲ್ಲ. ಈ ಸ್ಥಾನದ ಅವಧಿ 11-11-2026ರ ವರೆಗೆ ಇದೆ. 21-06-2024 ಕ್ಕೆ ಈಶಾನ್ಯ ಪದವಿಧರ ಕ್ಷೇತ್ರದಿಂದ ಡಾ. ಚಂದ್ರಶೇಖರ ಬಿ. ಪಾಟೀಲ್, 21-06-2024 ಕ್ಕೆ ಬೆಂಗಳೂರು ಪದವಿಧರ ಕ್ಷೇತ್ರದಿಂದ ಎ. ದೇವೇಗೌಡ,  21-06-2024 ಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ  ಡಾ. ವೈ.ಎ. ನಾರಾಯಣ ಸ್ವಾಮಿ, 21-06-2024 ಕ್ಕೆ ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್. ಭೋಜೆಗೌಡ, 21-06-2024 ಕ್ಕೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ನಿವೃತ್ತಿಯಾಗುತ್ತಿದ್ದಾರೆ.  ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕ ನೋಟೀಸ್ ಅನ್ನು 30-09-2023 ಪ್ರಕಟಣೆ ಮಾಡಬೇಕಾಗಿದೆ. ಫಾರಂ 18 ಅಥವಾ 19 ರಲ್ಲಿ ಅರ್ಜಿ ಸ್ವೀಕರಿಸಲು 06-11-2023 ಕಡೆಯ ದಿನವಾಗಿದೆ. ಮತದಾರರ ಕರಡು ಪ್ರತಿ ಪ್ರಕಟಿಸುವ ದಿನ 23-11-2023, ಮತದಾರರ ಪಟ್ಟಿ ಪ್ರಕಟಣೆ ದಿನ 23-11-2023, ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸ್ವೀಕರಿಸಲು 23-11-2023 ರಿಂದ 09-12-2023 ರ ವರೆಗೆ ಅವಕಾಶವಿದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ನಿವಾರಿಸಿ ಪೂರಕ ಪ್ರತಿಗಳನ್ನು ಸಿದ್ಧಪಡಿಸಿ ಪ್ರಕಟಿಸಲು 25-12-2023 ಹಾಗೂ ಮತದಾರರ ಅಂತಿಮ ಪಟ್ಟಿ ಪ್ರಕಟಿಸುವ ದಿನಾಂಕ 30-12-2023 ಆಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಚುನಾವಣಾ ಆಯೋಗದ ಸಮಗ್ರ ನಿರ್ದೇಶಗಳ ಅನ್ವಯ ಮಾಡತಕ್ಕದ್ದು ಎಂದು ಸೂಚಿಸಲಾಗಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗಳು ಆಗಸ್ಟ್ 21 ರಿಂದ ಸೆಪ್ಟೆಂಬರ್  02ರ ವರೆಗೆ  ನಡೆಯಲಿದ್ದು,ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ, ಕ.ರಾ.ರ.ಸಾ.ನಿಗಮವು ಪರೀಕ್ಷೆಗೆ ಹಾಜರಾಗುವ  ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ, “ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.  
ದೇಶದಲ್ಲಿಯೇ ಕರ್ನಾಟಕ ಮೊದಲ ಡಿಜಿಟಲ್ ಗ್ರಂಥಾಲಯ ಹೊಂದಿದ ರಾಜ್ಯ:ಮಧು ಬಂಗಾರಪ್ಪ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ 3.54 ಕೋಟಿ ಸದಸ್ಯರು ಡಿಜಿಟೆಲ್ ಗ್ರಂಥಾಲಯದಲ್ಲಿ ನೋಂದಣಿಯಾಗಿದ್ದು, 23.55 ಲಕ್ಷ ಇ–ಕಂಟೆಂಟ್‍ಗಳನ್ನು ಸಾರ್ವಜನಿಕರು ಉಪಯೋಗಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು. ಅವರು ಇಂದು ಬೆಂಗಳೂರು ಪಶ್ಚಿಮ ವಲಯದ ಹಂಪಿನಗರ ನಗರ ಕೇಂದ್ರ ಗ್ರಂಥಾಲಯದಲ್ಲಿ  ಹಮ್ಮಿಕೊಂಡಿದ್ದ ಗ್ರಂಥಪಾಲಕರ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ದೇಶದಲ್ಲಿಯೇ ಕರ್ನಾಟಕವು ಮೊದಲ ಡಿಜಿಟಲ್ ಗ್ರಂಥಾಲಯ ಹೊಂದಿರುವುದಕ್ಕೆ ಮಾದರಿಯಾಗಿದ್ದು, ಭಾರತ ಸರ್ಕಾರದ ಪಂಚಾಯತ್ ರಾಜ್ ಇಲಾಖೆಯು ದೇಶದ ಎಲ್ಲಾ ರಾಜ್ಯಗಳು ಕರ್ನಾಟಕ ರಾಜ್ಯದ ಸಾರ್ವಜನಿಕ ಗ್ರಂಥಾಲಯವನ್ನು  ಮಾದರಿಯಾಗಿರಿಸಿಕೊಂಡು ಗ್ರಂಥಾಲಯಗಳನ್ನು ರಚಿಸಬೇಕೆಂದು ಹೇಳಿರುವುದು ತುಂಬಾ ಸಂತಸದÀ ವಿಷಯ ಎಂದರು. ಭಾರತ ಗ್ರಂಥಾಲಯ ವಿಜ್ಞಾನದ ಪಿತಾಮಹಾರೆಂದೇ ಹೆಸರುವಾಸಿಯಾಗಿರುವ ಡಾ. ಎಸ್.ಆರ್. ರಂಗನಾಥನ್ ಅವರ ಜನ್ಮದಿನಚಾರಣೆ ಅಂಗವಾಗಿ ಆಗಸ್ಟ್ 12 ರಂದು ರಾಜ್ಯದಲ್ಲಿ ಗ್ರಂಥಪಾಲಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು. ರಾಜ್ಯದಲ್ಲಿ 3.50 ಲಕ್ಷ ಶಿಕ್ಷಕರಿದ್ದು, 1.20 ಕೋಟಿ ಮಕ್ಕಳಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಕೆಲವು ನೂನ್ಯತೆಗಳಿದ್ದು ಇವುಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ಇದರ ಜೊತೆಗೆ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.  ಮಕ್ಕಳ ಭವಿಷ್ಯಕ್ಕಾಗಿ ಎಲ್ಲಾ ಶಾಲೆಗಳ ಮುಂದೆ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯಗಳನ್ನು ಬಳಸುವ ಬಗ್ಗೆ ಪೋಸ್ಟರ್ ಅಳವಡಿಸಲಾಗುವುದು ಎಂದರು. ಇದೇ ಸಂದರ್ಭದಲ್ಲಿ 15 ಜನ ಉತ್ತಮ ಗ್ರಂಥಪಾಲಕರಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು. ರಸಪ್ರಶ್ನೆ ಸ್ಪರ್ಧೆ, ಚಿತ್ರಬಿಡಿಸುವ ಸ್ಪರ್ಧೆ, ಜಾನಪದ ಮತ್ತು ಚಿತ್ರಕಲಾ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. 5 ಜನ ಉತ್ತಮ ಓದುಗರನ್ನು  ಸನ್ಮಾನಿಸಲಾಯಿತು. ಗ್ರಂಥಪಾಲಕರ ದಿನಚಾರಣೆ ಹಾಗೂ ಪುಸ್ತಕ ಸಂಸ್ಕೃತಿ ಕುರಿತು ಉಪನ್ಯಾಸ ನೀಡಿದ ಬೆಂಗಳೂರು ವಿಶ್ವವಿದ್ಯಾಲಯದ ಐ.ಸಿ.ಎಸ್.ಎಸ್.ಆರ್–ಎಂ.ಆರ್.ಪಿ ಪ್ರಾಧ್ಯಾಪಕರು ಮತ್ತು ಸಂಶೋಧನಾ ನಿರ್ದೇಶಕರಾದ ಡಾ. ರಮೇಶ್ ಅವರು, ರಾಷ್ಟ್ರ ಮಟ್ಟದ ಮತ್ತು ಅಂತರಾಷ್ಟ್ರೀಯ ಮಟ್ಟದ ಗ್ರಂಥಾಲಯವು ನಮ್ಮ ರಾಜ್ಯದಲ್ಲಿ ಸ್ಥಾಪನೆಯಾಗಬೇಕೆಂದು ಎಲ್ಲರ ಪರವಾಗಿ ಸಚಿವರಲ್ಲಿ ಮನವಿ ಮಾಡಿದರು. ಸಾರ್ವಜನಿಕ ಗ್ರಂಥಾಲಯದ ನಿರ್ದೇಶಕ ಡಾ. ಸತೀಶಕುಮಾರ್ ಎಸ್. ಹೊಸಮನಿ ಅವರು ಪ್ರಾಸ್ತಾವಿಕ ಮಾತನಾಡಿ, “ಶ್ರೀಸಾಮಾನ್ಯರ ವಿಶ್ವವಿದ್ಯಾಲಯ” ಎಂದು  ಹೆಸರು ಪಡೆದಿರುವ ಗ್ರಂಥಾಲಯವು  ಕರ್ನಾಟಕದಲ್ಲಿ ಅತೀ ಹೆಚ್ಚು ಗ್ರಂಥಾಲಯಗಳನ್ನು  ಹೊಂದಿದೆ. ಡಿಜಿಟಲ್ ಸಾರ್ವಜನಿಕ ಗ್ರಂಥಾಲಯ ನಮ್ಮ ದೇಶದಲ್ಲಿಯೇ ಮೊಟ್ಟಮೊದಲ ಯೋನೆಯಾಗಿದ್ದು, ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸಿ ದೊಡ್ಡ ಪ್ರಮಾಣದಲ್ಲಿ ಕಲಿಕೆಗೆ ಅವಕಾಶ ಕಲ್ಪಿಸಲಾಗಿದೆ....
ಕಾಂಗ್ರೆಸ್ ‌ಸರ್ಕಾರದ ಭ್ರಷ್ಟಾಚಾರಗಳ ವಿರುದ್ದ ಕಾನೂನಾತ್ಮಕ ಹೋರಾಟ: ಬೊಮ್ಮಾಯಿ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಕರ್ನಾಟಕದ ಎಟಿಎಂ ಸರ್ಕಾರದ...
ಕಾರ್ಬನ್ ಮುಕ್ತಕ್ಕಾಗಿ ಪರಮಾಣು ಅಗತ್ಯ-ವಿಜ್ಞಾನಿ ಅನಗಂಟಿ ನರಸಿಂಹ… ಚಂದ್ರವಳ್ಳಿ ನ್ಯೂಸ್, ಹಿರಿಯೂರು:  75ನೇ ಭಾರತೀಯ ಸ್ವಾತಂತ್ರ್ಯ ಅಮೃತ ಮಹೋತ್ಸವ  ಗುರಿಯಂತೆ 2070ರ ವೇಳೆಗೆ...
ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿ ವಿರುದ್ಧ ಮತದಾರನ ಗೆಲುವು-ಮುಖ್ಯಮಂತ್ರಿ… ಚಂದ್ರವಳ್ಳಿ ನ್ಯೂಸ್, ಹಿರಿಯೂರು:  ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್...
ರಾಮಜೋಗಿಹಳ್ಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ಮುಖಂಡ ಮಂಜುನಾಥ್… ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲ್ಲೂಕಿನ ಅಡವಿ ರಾಮಜೋಗಿಹಳ್ಳಿಯಲ್ಲಿ  ಮಾದಿಗ ಸಮುದಾಯದವರ ಮೇಲೆ...
ಆಲಘಟ್ಟ ಗ್ರಾಪಂ ಅಧ್ಯಕ್ಷರಾಗಿ ನಾಗರಾಜಪ್ಪ ಅವಿರೋಧ ಆಯ್ಕೆ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಸಿರಿಗೆರೆ ಸಮೀಪದ ಆಲಘಟ್ಟ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ...