ಚಂದ್ರವಳ್ಳಿ ನ್ಯೂಸ್ ನವದೆಹಲಿ:
ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಮಾಜಿ ಸಚಿವ ಡಾ. ಟಿ. ಬಿ. ಜಯಚಂದ್ರ ಅವರ 77ನೇ ವರ್ಷದ ಹುಟ್ಟುಹಬ್ಬವನ್ನು ನವದೆಹಲಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಈ ಸಂದರ್ಭದಲ್ಲಿ ಖುದ್ದಾಗಿ ಭಾಗವಹಿಸಿ ಅವರಿಗೆ ಶುಭಾಶಯ ಕೋರಿದರು.
ಡಾ. ಜಯಚಂದ್ರ ಅವರ ಸುದೀರ್ಘ ರಾಜಕೀಯ ಪಯಣ ಹಾಗೂ ಸೇವಾ ಮನೋಭಾವವನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಅವರಿಗೆ ಭಗವಂತ ಉತ್ತಮ ಆಯುರಾರೋಗ್ಯ ಮತ್ತು ನೆಮ್ಮದಿ ನೀಡಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್:
"ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಜನಪರ ಸೇವೆ, ಸರಳತೆ, ಸೌಜನ್ಯ ಹಾಗೂ ಅಭಿವೃದ್ಧಿಪರ ಚಿಂತನೆಗಳ ಮೂಲಕ ಡಾ. ಟಿ. ಬಿ. ಜಯಚಂದ್ರ ಅವರು ಜನರ ವಿಶ್ವಾಸವನ್ನು ಗಳಿಸಿದ್ದಾರೆ.

ಮುಂದೆಯೂ ಅವರು ಇದೇ ಉತ್ಸಾಹ ಮತ್ತು ಬದ್ಧತೆಯೊಂದಿಗೆ ಸಮಾಜ ಸೇವೆಯನ್ನು ಮುಂದುವರಿಸಲಿ ಎಂದು ಆಶಿಸುತ್ತೇನೆ," ಎಂದು ತಿಳಿಸಿದರು.
ಈ ಸರಳ ಜನ್ಮದಿನಾಚರಣೆಯ ಸಂದರ್ಭದಲ್ಲಿ ಹಲವು ಪ್ರಮುಖ ನಾಯಕರು, ಜನಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು ಶುಭಹಾರೈಸಿದರು.



