Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪ್ರತಿ ಜಿಲ್ಲೆಯಲ್ಲಿ ಬಡವರಿಗೆ 50 ಸಾವಿರ ಸೈಟ್ ಹಂಚಿಕೆಗೆ ಸಿದ್ಧತೆ-ಡಿಕೆ ಶಿವಕುಮಾರ್

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು: 
ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯ ಹಿಂದಿನ ಪರಿಸ್ಥಿತಿ
, ಪ್ರಸ್ತುತ ಪರಿಸ್ಥಿತಿ ಸೇರಿದಂತೆ ಹಲವು ವಿವರಗಳನ್ನು ಪಡೆಯಬೇಕು. ಅಭಿವೃದ್ಧಿ ಕೆಲಸಗಳಲ್ಲಿ ಬೋಗಸ್ ಬಿಲ್, ಕಾಮಗಾರಿಗಳಿಗೆ ಅವಕಾಶ ನೀಡಬಾರದು. ಪ್ರತಿ ಜಿಲ್ಲೆಯಲ್ಲಿ ಕಂದಾಯ ಇಲಾಖೆಯಿಂದ 50 ಸಾವಿರ ಸೈಟ್ ಹಂಚಿಕೆಗೆ ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಸರ್ಕಾರಿ ಜಮೀನುಗಳನ್ನು ಗುರುತಿಸಲಾಗಿದೆ. ಬಡವರಿಗೆ ಸೈಟ್ ಹಂಚುವ ಯೋಜನೆ ಇದಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿಗಳು, ಕಸ್ತೂರಿ ರಂಗನ್ ವರದಿ - ಪಶ್ಚಿಮ ಘಟ್ಟಗಳ ಬಗ್ಗೆ ಚರ್ಚಿಸಲು ಒಂದು ದಿನದ ವಿಶೇಷ ಅಧಿವೇಶನ: ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಸರ್ಕಾರ ಹೊರಡಿಸಿರುವ
7ನೇ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಚರ್ಚಿಸಿ, ಪಕ್ಷಾತೀತವಾಗಿ ತೀರ್ಮಾನ ಕೈಗೊಳ್ಳಲು ಒಂದು ದಿನದ ವಿಶೇಷ ಅಧಿವೇಶನವನ್ನು ಕರೆಯಲಾಗುವುದು ಎಂದರು.

ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ಪ್ರಸ್ತುತ ರೂಪದಲ್ಲಿ ಅಂತಿಮಗೊಳಿಸಬಾರದು. ಆರು ರಾಜ್ಯಗಳ 56,000 ಚ.ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಲು ಕೇಂದ್ರ ಪ್ರಸ್ತಾಪಿಸಿದೆ. ಕರ್ನಾಟಕದ 20,668 ಚ.ಕಿ.ಮೀ. ಪ್ರದೇಶ, 10 ಜಿಲ್ಲೆಗಳ (ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಉಡುಪಿ) 33 ತಾಲ್ಲೂಕುಗಳು ಹಾಗೂ 1,449 ಗ್ರಾಮಗಳು ESA ವ್ಯಾಪ್ತಿಗೆ ಸೇರುತ್ತವೆ. ಇದರಿಂದ ಕೃಷಿಕರ ಜೀವನೋಪಾಯ ಹಾಗೂ ಭವಿಷ್ಯದ ಅಭಿವೃದ್ಧಿಗೆ ತೊಂದರೆಯಾಗಲಿದೆ ಎಂದು ಸಿಎಂ ಎಚ್ಚರಿಸಿದರು.

Advertisement

 

ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ತಿರಸ್ಕರಿಸಿ, ಕೇಂದ್ರ ಸರ್ಕಾರವು 31 ಜುಲೈ 2024ರ ಕರಡು ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಲು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಒಮ್ಮತದ ನಿರ್ಧಾರ ಕೈಗೊಂಡಿತ್ತು. ಆದಾಗ್ಯೂ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರ್ಕಾರ ಇದನ್ನು ಒಪ್ಪುವುದಿಲ್ಲ ಎಂದು ಸಿಎಂ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.

ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ, ಜನರ ಅಭಿಪ್ರಾಯವನ್ನೂ ಪಡೆಯಲಾಗುವುದು. ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ವತಿಯಿಂದ ಜನಜಾಗೃತಿ ಮೂಡಿಸಲಾಗುವುದು. ರಾಜ್ಯದ ನಿಲುವನ್ನು ಕೇಂದ್ರ ಸರ್ಕಾರ ಗೌರವಿಸಬೇಕು. ಈ ವಿಚಾರವಾಗಿ ಕಾನೂನು ಚೌಕಟ್ಟಿನಲ್ಲಿ ಚರ್ಚಿಸಲಾಗುವುದು. ಕರ್ನಾಟಕಕ್ಕೆ ಒಂದು ನಿಯಮ ಹಾಗೂ ಬೇರೆಡೆಗೆ ಇನ್ನೊಂದು ನಿಯಮವನ್ನು ಕೇಂದ್ರ ಸರ್ಕಾರ ಅನುಸರಿಸುತ್ತಿದೆ ಎಂದು ಸಿಎಂ ಡಿಕೆಶಿ ವಾಗ್ದಾಳಿ ಮಾಡಿದರು.

ಬರಗಾಲ ಪರಿಸ್ಥಿತಿ ನಿರ್ವಹಣೆ: ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ಶಾಸಕರ ಪಾತ್ರದ ಬಗ್ಗೆ ಅವರಿಗೆ ಸಭೆಯಲ್ಲಿ ವಿವರಿಸಲಾಗಿದೆ. 100ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಶೀಘ್ರವೇ ಉಪಮುಖ್ಯಮಂತ್ರಿಗಳು ಘೋಷಣೆ ಮಾಡಲಿದ್ದಾರೆ. ಭವಿಷ್ಯದಲ್ಲಿ ಮತ್ತಷ್ಟು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುವ ಬಗ್ಗೆ ಸರ್ಕಾರ ನಿರ್ಣಯ ಮಾಡಲಿದ್ದು, ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ ನಿಯೋಗದೊಂದಿಗೆ ತೆರಳಿ ಮನವಿ ಮಾಡಲಿದ್ದೇನೆ ಎಂದು ಸಿಎಂ ತಿಳಿಸಿದರು.

ಎಸ್ ಐ ಆರ್ - ಅರ್ಹ ಮತದಾರರ ಹಕ್ಕು ಉಳಿಸಲು ಸರ್ಕಾರ ಬದ್ಧ: ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸುಮಾರು 1 ಕೋಟಿಗೂ ಹೆಚ್ಚು ಜನರನ್ನು ಮತಪಟ್ಟಿಯಿಂದ ಕೈಬಿಡಲಾಗಿದೆ. ಖಾಯಂ ನಿವಾಸ ಪತ್ರ, ಜಾತಿ ಪ್ರಮಾಣ ಪತ್ರವನ್ನು ಸರ್ಕಾರದಿಂದ ಒದಗಿಸಲಾಗುತ್ತಿದೆ. ಬೂತ್ ಮಟ್ಟದಲ್ಲಿ ಸಭೆ ನಡೆಸಿ ಮತಪಟ್ಟಿಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯುಕ್ತರನ್ನು ಕೋರಲಾಗಿದೆ. ಜನರಿಗೆ ಮತದ ಶಕ್ತಿ ಹಾಗೂ ಮತದ ಹಕ್ಕಿನ ಬಗ್ಗೆ ಶಾಸಕರು ಅರಿವು ಮೂಡಿಸಬೇಕು. ಅರ್ಹ ಮತದಾರರಿಗೆ ಅನ್ಯಾಯವಾಗಬಾರದು. ಜನರಿಗೆ ಮತದಾನದ ಹಕ್ಕು ಕೊಡಿಸಲು ಶ್ರಮಿಸಬೇಕೆಂದು ಶಾಸಕರಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.

ಭಾರತ್ ಜೋಡೋ ಯುವಸಂಘ - ಆನ್‌ಲೈನ್‌ನಲ್ಲಿ 7 ಲಕ್ಷ ನೋಂದಣಿ: ಯುವಕರಿಗೆ ಹೊಸ ಪೀಳಿಗೆಯ ಹೊಸ ಕಾರ್ಯಕ್ರಮ ರೂಪಿಸಲಾಗಿದೆ. ಪಂಚಾಯತಿ ಮಟ್ಟದಲ್ಲಿ ಕ್ರೀಡೆ, ಯೋಗ, ಸಮುದಾಯ ಸೇವೆ, ನಾಯಕತ್ವ, ವಿಪತ್ತು ನಿರ್ವಹಣೆ ವಿಷಯಗಳ ಬಗ್ಗೆ ಸೂಕ್ತ ಅರಿವು, ಡ್ರಗ್ಸ್ ಮುಕ್ತರಾಗಲು, ದೇಶದ ಸಮಗ್ರತೆ, ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಜಾತಿ, ಧರ್ಮಗಳನ್ನು ಬದಿಗೊತ್ತಿ ಭಾಗವಹಿಸಲು ಮಾರ್ಗದರ್ಶನ ನೀಡಬೇಕು. ಪ್ರತಿ ಸಂಘಕ್ಕೆ 10 ಲಕ್ಷ ರೂ.ಗಳನ್ನು ನೀಡಲಾಗುವುದು. ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ನೀಡಬೇಕು. ಪಂಚಾಯತಿಗಳಲ್ಲಿ 200 ಜನ ಸದಸ್ಯರಾಗಬೇಕು. ಆನ್‌ಲೈನ್‌ನಲ್ಲಿ ಈಗಾಗಲೇ 7 ಲಕ್ಷ ಜನ ಸದಸ್ಯತ್ವ ಪಡೆದಿದ್ದಾರೆ. ಸರ್ಕಾರಿ ಶಾಲೆ ಹಾಗೂ ಸಮುದಾಯ ಭವನಗಳಲ್ಲಿ ನಿಯಮಿತವಾಗಿ ಸಭೆ ನಡೆಸಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.

ಎಸ್ ಐ ಆರ್ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆ: ನವೆಂಬರ್ ಒಳಗೆ ಪಂಚಾಯತಿ ಹಾಗೂ ಪಾಲಿಕೆ ಚುನಾವಣೆಗಳನ್ನು ನಡೆಸಲಾಗುವುದು. ಎಸ್ ಐ ಆರ್ ಮುಗಿದ ತಕ್ಷಣ ಚುನಾವಣೆ ನಡೆಸಲು ಆಯೋಗಕ್ಕೆ ಪತ್ರ ಬರೆಯಲಾಗುವುದು. ಗ್ರಾಮೀಣ ಹಾಗೂ ತಾಲ್ಲೂಕುಗಳಿಂದ ಜನರ ವಲಸೆ ತಪ್ಪಿಸಲು ಸ್ಥಳೀಯ ಮಟ್ಟದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಆದ್ಯತೆ ನೀಡುವಂತೆ ಶಾಸಕರಿಗೆ ತಿಳಿಸಲಾಗಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ವಿರೋಧ ಪಕ್ಷದವರಿಗೆ ಬಡವರು, ಬರದ ಬಗ್ಗೆ ಕಾಳಜಿ ಇಲ್ಲ: ವಿರೋಧ ಪಕ್ಷದವರಿಗೆ ಬಡವರು, ಬರದ ಬಗ್ಗೆ ಕಾಳಜಿ ಇಲ್ಲ. ಅವರಿಗೆ ರಾಜಕೀಯವೇ ಮುಖ್ಯ. ಡಿಸಿಎಂ ಅವರು ಶೀಘ್ರವೇ ಬರಪೀಡಿತ ತಾಲ್ಲೂಕುಗಳನ್ನು ಪ್ರಕಟಿಸಲಿದ್ದಾರೆ. ಕುಡಿಯುವ ನೀರಿಗೆ 1 ಕೋಟಿ ರೂ. ನೀಡಲಾಗಿದೆ. 102 ತಾಲ್ಲೂಕುಗಳ ಪ್ರವಾಸ ಮತ್ತು ಅಧ್ಯಯನ ಮುಕ್ತಾಯವಾದ ನಂತರ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಲಾಗುವುದು.

5,000ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಹೊಸ ಉದ್ಯಾನಗಳು: ಬೆಂಗಳೂರು ನಗರಕ್ಕೆ ಹಸಿರು ಹೊದಿಕೆ ಹೆಚ್ಚಿಸಲು ತುರಹಳ್ಳಿ ಅರಣ್ಯ, ತೊಟ್ಟಿಕಲ್ಲು ಜಲಪಾತ, ಬಿಎಂ ಕಾವಲ್ ಅರಣ್ಯ, ಬಸವಂತಪುರ, ಮಂಡೂರು ಹಾಗೂ ಜ್ಯೋತಿಪುರ ಸೇರಿದಂತೆ ಒಟ್ಟು 5,000ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಹೊಸ ಉದ್ಯಾನಗಳನ್ನು ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ. ಇದರ ಮೂಲಕ ಬೆಂಗಳೂರಿನಲ್ಲಿ ಹಸಿರು ಪ್ರದೇಶ ವಿಸ್ತರಣೆ, ಪರಿಸರ ಸಂರಕ್ಷಣೆ ಮತ್ತು ಭವಿಷ್ಯದ ನೀರಿನ ಭದ್ರತೆಗೆ ಒತ್ತು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಡತೆ ವ್ಯಕ್ತಿತ್ವ ತೋರಿಸುತ್ತದೆ — ನುಡಿ ವ್ಯಕ್ತಿತ್ವ ಸಾಬೀತುಪಡಿಸುತ್ತದೆಸಂಬಂಧಗಳ ರಕ್ಷಣೆಯ ಪವಿತ್ರ ಬಂಧವೇ…..ರಕ್ಷಾಬಂಧನರೈಲ್ವೆ ಮೇಲ್ಸೇತುವೆಗಳ ಭೂಮಿಪೂಜೆ:ಕೇಂದ್ರ ಸಚಿವ ಸೋಮಣ್ಣ, ಸಂಸದ ಕಾರಜೋಳ ಭೇಟಿಶಿಕ್ಷಕರಿಗೆ EPF ಮತ್ತು ESI ಕುರಿತು ಮಾಹಿತಿ"ಇಂಡಿ ಮೈತ್ರಿಕೂಟದ ಓಲೈಕೆಗೆ ಕಾವೇರಿ ನೀರು ತಮಿಳುನಾಡು ಪಾಲು": ಜೆಡಿಎಸ್ ಆಕ್ರೋಶ'ಶೂದ್ರ ಸೇವಾ ಸಂಘ' ಉದ್ಘಾಟಿಸಿದ ಸಿದ್ದರಾಮಯ್ಯ: ಶೋಷಿತ ಸಮುದಾಯಗಳ ಒಗ್ಗಟ್ಟಿಗೆ ಕರೆ ಪ್ರತಿ ಜಿಲ್ಲೆಯಲ್ಲಿ ಬಡವರಿಗೆ 50 ಸಾವಿರ ಸೈಟ್ ಹಂಚಿಕೆಗೆ ಸಿದ್ಧತೆ-ಡಿಕೆ ಶಿವಕುಮಾರ್"ಕರ್ನಾಟಕ ಸ್ಪೀಡ್‌": 'ಡಿಎನ್ ಸೊಲ್ಯೂಷನ್ಸ್' ತಯಾರಿಕಾ ಘಟಕ ಉದ್ಘಾಟಿಸಿದ ಸಚಿವ ಎಂ.ಬಿ. ಪಾಟೀಲ್ಮಹಿಳಾ ಕ್ರಿಕೆಟರ್ ಶ್ರೇಯಾಂಕಾ ಪಾಟೀಲ್‌ಗೆ ಸಚಿವ ಎಂ.ಬಿ. ಪಾಟೀಲ್ ಅಭಿನಂದನೆನೇಪಾಳ ಪ್ರವಾಹ ದುರಂತ: ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಸರ್ಕಾರ ನಿರಂತರ ಶ್ರಮಿಸಲಿದೆ – ಸಚಿವ ಎಂ.ಬಿ. ಪಾಟೀಲ್