ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದಲ್ಲಿ ರೈಲ್ವೆ ಮೇಲ್ಸೇತುವೆಗಳ ಭೂಮಿಪೂಜೆ: ಭಾನುವಾರ ಕೇಂದ್ರ ಸಚಿವ ವಿ. ಸೋಮಣ್ಣ, ಸಂಸದ ಕಾರಜೋಳ ಭೇಟಿ
ಚಿತ್ರದುರ್ಗ ಜಿಲ್ಲೆಯ ಬಹುವರ್ಷಗಳ ಬೇಡಿಕೆಯಾಗಿದ್ದ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ದೊರೆಯುತ್ತಿದ್ದು, ಆಗಸ್ಟ್ 30ರ ಭಾನುವಾರ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಹಾಗೂ ಲೋಕಸಭಾ ಸದಸ್ಯರಾದ ಗೋವಿಂದ ಎಂ. ಕಾರಜೋಳ ಅವರು ಭೂಮಿಪೂಜೆ ನೆರವೇರಿಸಲಿದ್ದಾರೆ.
ಸಂಸದ ಗೋವಿಂದ ಕಾರಜೋಳ ಅವರ ಸತತ ಪ್ರಯತ್ನದ ಫಲವಾಗಿ ರೈಲ್ವೆ ಸಚಿವಾಲಯವು ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ.
ಚಿತ್ರದುರ್ಗ ನಗರ (LC 22): ದಾವಣಗೆರೆ ಮಾರ್ಗದಲ್ಲಿ ಬರುವ ರೈಲ್ವೆ ಲೆವೆಲ್ ಕ್ರಾಸ್ 22ರಲ್ಲಿ ಸೇತುವೆ ನಿರ್ಮಾಣಕ್ಕೆ ₹32.51 ಕೋಟಿ ಅನುದಾನ ಮೀಸಲಿಡಲಾಗಿದೆ. ಭಾನುವಾರ ಬೆಳಿಗ್ಗೆ 11:15ಕ್ಕೆ ರೈಲ್ವೆ ಸ್ಟೇಷನ್ ಬಳಿ ಭೂಮಿಪೂಜೆ ಹಾಗೂ ಸಾರ್ವಜನಿಕ ಸಭೆ ನಡೆಯಲಿದೆ.
ಚಿಕ್ಕಜಾಜೂರು (Gate 01): ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಬಳಿಯ ರೈಲ್ವೆ ಗೇಟ್ 01ರ ಮೇಲ್ಸೇತುವೆಗೆ ₹25.15 ಕೋಟಿ ಅನುದಾನ ಲಭಿಸಿದ್ದು, ಮಧ್ಯಾಹ್ನ 2:00 ಗಂಟೆಗೆ ಭೂಮಿಪೂಜೆ ನೆರವೇರಲಿದೆ.
ಹಳಿಯೂರು (LC 15): ಹಳಿಯೂರು ಬಳಿಯ ರೈಲ್ವೆ ಲೆವೆಲ್ ಕ್ರಾಸ್ 15ರ ಮೇಲ್ಸೇತುವೆಗೆ ಭೂ-ಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ.




