ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಮಂಡ್ಯ ತಾಲೂಕಿನ ಹಾಲಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎಆರ್‌ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ ಸಂಸ್ಥೆಯ ಸಿಎಸ್‌ಆರ್ ನೆರವಿನಡಿ 32.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ 2 ನೂತನ ತರಗತಿ ಕೊಠಡಿಗಳನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಉದ್ಘಾಟಿಸಿದರು.
ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, "ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಶೈಕ್ಷಣಿಕ ಮೂಲ ಸೌಕರ್ಯಗಳನ್ನು ಬಲಪಡಿಸುವುದು ಹಾಗೂ ನಮ್ಮ ಮಕ್ಕಳಿಗೆ ಗುಣಮಟ್ಟದ ಕಲಿಕಾ ಅವಕಾಶಗಳನ್ನು ಒದಗಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ" ಎಂದು ತಿಳಿಸಿದರು.
ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡುವ ಪ್ರೋತ್ಸಾಹ ಅತ್ಯಂತ ಮುಖ್ಯವಾದದ್ದು ಎಂದ ಸಚಿವರು, "ನಮ್ಮ ಶಾಲೆಗಳ ಅಭಿವೃದ್ಧಿಯಲ್ಲಿ ಹೂಡಿಕೆ ಮಾಡುವುದು ಎಂದರೆ ಅದು ದೇಶದ ಉಜ್ವಲ ಭವಿಷ್ಯಕ್ಕಾಗಿ ಮಾಡುವ ಬಂಡವಾಳ ಹೂಡಿಕೆಯಾಗಿದೆ" ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಶಾಲಾ ಶಿಕ್ಷಕರು, ಜನಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




