Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಡಿ.ಕೆ ಶಿವಕುಮಾರ್ ಅವರಿಂದ ಹಿರಿಯೂರಿನ 16 ಕೆರೆಗಳು ಹಾಗೂ ಗಾಯತ್ರಿ ಜಲಾಶಯಕ್ಕೆ ನೀರು ಭರ್ತಿ ಕಾಮಗಾರಿಗೆ ಚಾಲನೆ

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ 16 ಕೆರೆಗಳು ಹಾಗೂ ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸುವ ಮತ್ತು ಅಂತರ್ಜಲ ಅಭಿವೃದ್ಧಿಪಡಿಸುವ ರೂ.244 ಕೋಟಿ ಮೊತ್ತದ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವೆಂಬರ್ 3ರಂದು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದ್ದಾರೆ.

ಹಿರಿಯೂರು ತಾಲೂಕಿನ ದಿಂಡಾವರ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಂಗಳವಾರ ಮಧ್ಯಾಹ್ನ 12.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಸೇರಿದಂತೆ ಸಚಿವರು, ಜನಪ್ರತಿನಿಧಿಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಜವನಗೊಂಡನಹಳ್ಳಿ ಹೋಬಳಿಯಲ್ಲಿ ನಿರಂತರ ಬರ ಪರಿಸ್ಥಿತಿ, ಕೆರೆಗಳಲ್ಲಿ ನೀರಿನ ಕೊರತೆ ಹಾಗೂ ಅಂತರ್ಜಲ ಮಟ್ಟ ಕುಸಿತದ ಹಿನ್ನೆಲೆಯಲ್ಲಿ ಈ ಯೋಜನೆ ರೂಪಿಸಲಾಗಿದೆ. ಈ ಭಾಗದಲ್ಲಿ ಅಂತರ್ಜಲಕ್ಕಾಗಿ ಸುಮಾರು 1,000 ಅಡಿ ಆಳದವರೆಗೆ ಕೊಳವೆಬಾವಿ ಕೊರೆಯಬೇಕಾದ ಪರಿಸ್ಥಿತಿ ಎದುರಾಗಿರುವುದರಿಂದ, ದೀರ್ಘಕಾಲಿಕ ಜಲಭದ್ರತೆ ಕಲ್ಪಿಸುವ ಉದ್ದೇಶದಿಂದ ಕೆರೆ ತುಂಬಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

ಯೋಜನೆಯಡಿ 0.307 ಟಿಎಂಸಿ ನೀರನ್ನು ಬಳಸಿ ಒಟ್ಟು 16 ಕೆರೆಗಳು ಹಾಗೂ ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸಲಾಗುತ್ತದೆ. ಇದರಲ್ಲಿ ಸಣ್ಣ ನೀರಾವರಿ ಇಲಾಖೆಯ 10 ಕೆರೆಗಳು ಹಾಗೂ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 6 ಕೆರೆಗಳು ಸೇರಿವೆ.

ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿ, ಜಾಕ್‍ವೆಲ್ ಮತ್ತು ಪಂಪ್‍ಹೌಸ್ ಮೂಲಕ ನೀರನ್ನು ಎತ್ತಿ ಕೆರೆಗಳಿಗೆ ಪೂರೈಸುವ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಯೋಜನೆಯಡಿ 2000 ಊP ಸಾಮಥ್ರ್ಯದ ಗಿಖಿ ಪಂಪುಗಳು, ಸುಮಾರು 28.13 ಕಿ.ಮೀ. ಒS ಪೈಪ್‍ಲೈನ್ ಹಾಗೂ 16.82 ಕಿ.ಮೀ. ಊಆPಇ ಪೈಪ್‍ಲೈನ್ ನಿರ್ಮಿಸಲಾಗುತ್ತದೆ.

ಬರಪೀಡಿತ ಪ್ರದೇಶಗಳಲ್ಲಿ ಕೆರೆಗಳನ್ನು ತುಂಬಿಸಿ ಅಂತರ್ಜಲವನ್ನು ಪುನಶ್ಚೇತನಗೊಳಿಸುವುದು ನಮ್ಮ ಇಲಾಖೆಯ ಪ್ರಮುಖ ಆದ್ಯತೆಯಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಈ ರೂ.244 ಕೋಟಿ ಯೋಜನೆಗೆ ಚಾಲನೆ ದೊರೆಯುತ್ತಿರುವುದು ಹಿರಿಯೂರು ಭಾಗದ ಜನರಿಗೆ ಮಹತ್ವದ ಹೆಜ್ಜೆಯಾಗಿದೆ. ಕೆರೆಗಳು ತುಂಬುವುದರಿಂದ ಕುಡಿಯುವ ನೀರಿನ ಭದ್ರತೆ, ಅಂತರ್ಜಲ ಮಟ್ಟ ಸುಧಾರಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಹಕಾರವಾಗಲಿದೆ ಎಂದು ಡಾ. ಅಜಯ್ ಧರ್ಮಸಿಂಗ್ ಹೇಳಿದ್ದಾರೆ.

ಯೋಜನೆಗೆ 2026ರ ಜುಲೈ 21ರಂದು  ರೂ.244 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿಯನ್ನು 30 ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಸಣ್ಣ ನೀರಾವರಿ ಯೋಜನೆಗಳು ಕೇವಲ ನೀರಾವರಿ ಸೌಲಭ್ಯಕ್ಕೆ ಸೀಮಿತವಾಗಿರುವುದಿಲ್ಲ. ಅವು ಗ್ರಾಮೀಣ ಪ್ರದೇಶದ ಕುಡಿಯುವ ನೀರಿನ ಭದ್ರತೆ, ಅಂತರ್ಜಲ ಪುನರ್ಭರ್ತಿ ಮತ್ತು ರೈತರ ಜೀವನೋಪಾಯಕ್ಕೆ ನೇರವಾಗಿ ಸಂಬಂಧಿಸಿದ ಮೂಲಸೌಕರ್ಯ. ಈ ಯೋಜನೆಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ.03ರಂದು ಹಿರಿಯೂರು ತಾಲೂಕಿನಲ್ಲಿ ರೂ. 2,167.01 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಡಿ.ಕೆ. ಶಿವಕುಮಾರ್ ಚಾಲನೆಡಿ.ಕೆ ಶಿವಕುಮಾರ್ ಅವರಿಂದ ಹಿರಿಯೂರಿನ 16 ಕೆರೆಗಳು ಹಾಗೂ ಗಾಯತ್ರಿ ಜಲಾಶಯಕ್ಕೆ ನೀರು ಭರ್ತಿ ಕಾಮಗಾರಿಗೆ ಚಾಲನೆಹಿರಿಯೂರು ತಾಲೂಕಿನಲ್ಲಿಂದು ಮುಖ್ಯಮಂತ್ರಿ ಪ್ರವಾಸ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ- ಸಚಿವ ಟಿ.ರಘುಮೂರ್ತಿವಿಪ ಉಪಚುನಾವಣೆಯ ಗೆಲುವು-ಸೋಲಿನ ಪ್ರತಿಫಲನ: ಹಿರಿಯೂರು ಅಖಾಡದಲ್ಲಿ ಬದಲಾದ ರಾಜಕೀಯ ಸಮೀಕರಣ!ಅರ್ಥಪೂರ್ಣವಾಗಿ ಜರುಗಿತು 'ಕನ್ನಡ ಕಲರವ-4' ಕನ್ನಡ ರಾಜ್ಯೋತ್ಸವ ಅಕ್ಷರದ ಆದಿಯಿಂದ ಆತ್ಮವೈಭವದವರೆಗೆ ಅರಳಿದ ಕನ್ನಡದ ಕರುನಾಡು: ಕಾಶಿಗೌಸೌಹಾರ್ದದ ತೋಟಕೆ ಸಂಶಯದ ಮುಳ್ಳು, ವಿವೇಕದ ಬೆಳಕಲಿ ಅರಳಲಿ ಒಗ್ಗಟ್ಟಿನ ಹೂವು: ಕಾಶಿಗೌಪ್ರತಿ ಕನ್ನಡ ರಾಜ್ಯೋತ್ಸವದಲ್ಲಿ ನೆನಪಿಸಿಕೊಳ್ಳಬೇಕಾದ ವಿಷಯಗಳುಸೀಮಂತ್ ಕುಮಾರ್ ಸಿಂಗ್ 'ಮುಖ್ಯ ಗುಮಾಸ್ತ'ನಂತೆ ವರ್ತಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿಕೆಪಿಎಸ್‌ಸಿ ತನಿಖೆ ಹೆಸರಲ್ಲಿ ಐಟಿ, ಇಡಿ ದುರುಪಯೋಗಕ್ಕೆ ಕೇಂದ್ರ ಸಚಿವರ ಹುನ್ನಾರ: ಪ್ರಿಯಾಂಕ್ ಖರ್ಗೆ