Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

14.21 ಲಕ್ಷ ರೈತರಿಗೆ ಈ ವರ್ಷ 2249 ಕೋಟಿ ರೂ. ಪರಿಹಾರ- ಕೃಷ್ಣ ಭೈರೇಗೌಡ

 ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ರಾಜ್ಯದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು.


        ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ಸದನಕ್ಕೆ ಈ ಮಾಹಿತಿ ನೀಡಿದರು.

      ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು, ರಾಜ್ಯದಲ್ಲಿ 86.81 ಲಕ್ಷ ರೈತ ಕುಟುಂಬಗಳಿದ್ದು, 118.5 ಲಕ್ಷ ಹೆಕ್ಟೇರ್ ಮಳೆ ಆಶ್ರಿತ ಪ್ರದೇಶವಿದೆ.  ಆದರೆ ರಾಜ್ಯದಲ್ಲಿ ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬುದಾಗಿ ಆರೋಪಿಸಿದರು.  ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು, 2023 ರಲ್ಲಿ ಬರ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದಾಗ, ಕೇಂದ್ರ ಸರ್ಕಾರ ನೆರವಿಗೆ ಬರಲಿಲ್ಲ.  ನಮ್ಮ ಸರ್ಕಾರ ಸುಪ್ರಿಂಕೋರ್ಟ್ ಮೊರೆಹೋಗಿ ಪರಿಹಾರ ಕೇಳುವ ಪ್ರಸಂಗ ಬರುವಂತಾಯಿತು. 

ಪರಿಹಾರ ಅನುದಾನಕ್ಕಾಗಿ ಸುಪ್ರಿಂಕೊರ್ಟ್ ಮೊರೆಹೋಗಿ ಅನುದಾನ ಪಡೆದದ್ದು ದೇಶದ ಇತಿಹಾಸದಲ್ಲಿ ದಾಖಲಾಯಿತು.  ಈ ಸಂದರ್ಭದಲ್ಲಿ ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಪರಿಹಾರವನ್ನು ನಮ್ಮ ಸರ್ಕಾರ ಕೊಟ್ಟಿದೆ.  38 ಲಕ್ಷ ರೈತರಿಗೆ ಸುಮಾರು 4300 ಕೋಟಿ ರೂ. ಪರಿಹಾರವನ್ನು ನಾವು ಕೊಟ್ಟಿದ್ದೇವೆ.  ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ ಈಗಾಗಲೇ 2,249 ಕೋಟಿ ರೂ. ಪರಿಹಾರವನ್ನು ನೀಡಿದ್ದೇವೆ.  ಸರ್ಕಾರದ ವೈಫಲ್ಯ ಇದ್ದರೆ ಟೀಕೆ ಮಾಡಲಿ, ಆದರೆ ಮಾಡಿದ ಕೆಲಸವನ್ನು ಮಾಡಿಯೇ ಇಲ್ಲ ಎಂದರೆ, ಅದನ್ನು ಕೇಳಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.


  ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಮಾತನಾಡಿ, ಮುಖ್ಯಮಂತ್ರಿಗಳು ಈಗಾಗಲೇ ಕಂದಾಯ ಸಚಿವರೊಂದಿಗೆ ದೆಹಲಿಗೆ ತೆರಳಿ, ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ.  ಈ ವರ್ಷ ರೈತರಿಗೆ ಪರಿಹಾರ ನೀಡಲು ಹಾಗೂ ಅತಿವೃಷ್ಟಿಯಿಂದ ಉಂಟಾದ ಆಸ್ತಿ ಪಾಸ್ತಿಗಳಿಗೆ ಪರಿಹಾರ ಮೊತ್ತ ಸೇರಿದಂತೆ ಕೇಂದ್ರ ಸರ್ಕಾರ ಇದುವರೆಗೂ ಯಾವುದೇ ಅನುದಾನ ಬಿಡುಗೆ ಮಾಡಿಲ್ಲ.  

ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿ ಅನುಭವಿಸಿದ ರೈತರಿಗೆ ವಿಪತ್ತು ಪರಿಹಾರದಲ್ಲಿನ ಮಾರ್ಗಸೂಚಿಗಿಂತಲೂ ಹೆಚ್ಚುವರಿಯಾಗಿ ಪರಿಹಾರ ಮೊತ್ತವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ ಎಂದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!