Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು 3 ದಿನ ತರಬೇತಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಇದೇ ಜುಲೈ 17 ರಿಂದ 19 ರವರೆಗೆ ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಆಸಕ್ತ ರೈತರಿಗೆ ವೈಜ್ಞಾನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು 3 ದಿನಗಳ ವಸತಿಯುಕ್ತ ಉಚಿತ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


ಜುಲೈ 17ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಪಶುಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಡಾ.ದೊಡ್ಡಮಲ್ಲಯ್ಯ, ಹಿರಿಯೂರು ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ.ನಾಗರಾಜ್ ಅವರು ವೈಜ್ಞಾನಿಕ ಹೈನುಗಾರಿಕೆ ಪದ್ದತಿ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ.


ಜುಲೈ18ರಂದು ಮೊಳಕಾಲ್ಮುರು ಪಶು ಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸಿ.ತಿಪ್ಪೇಸ್ವಾಮಿ, ಚಿತ್ರದುರ್ಗ ಪಶುಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಡಾ.ದೊಡ್ಡಮಲ್ಲಯ್ಯ, ಹಿರಿಯೂರು ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ.ನಾಗರಾಜ್ ಅವರು ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ಪದ್ದತಿ ಕುರಿತು ಮಹಿತಿ ನೀಡಲಿದ್ದಾರೆ. ಜುಲೈ19ರಂದು ಸೂಗೂರು, ಕಾಂತ್ರಿಕೇನಹಳ್ಳಿ ಮತ್ತು ಹಿರಿಯೂರಿನ ವಿವಿಧ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ತಾಕುಗಳಿಗೆ ರೈತರನ್ನು ಕರೆದುಕೊಂಡು ಹೋಗಲಾಗುವುದು.


ಆದ ಪ್ರಯುಕ್ತ ಆಸಕ್ತ 40 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು. ಮೊದಲು ನೋಂದಾವಣಿ ಮಾಡಿಕೊಂಡ 40 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿ ತರಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನೀಕಾಂತ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST